ದೇಶ

ಟರ್ಕಿ ಬೆನ್ನಲ್ಲೇ ಸಿಕ್ಕಿಂನಲ್ಲೂ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು

ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಸಿಕ್ಕಿನಲ್ಲೂ ಭೂಕಂಪನದ ಅನುಭವವಾಗಿದೆ.

ಟರ್ಕಿ ಬೆನ್ನಲ್ಲೇ ಸಿಕ್ಕಿಂನಲ್ಲೂ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ಸಂಗ್ರಹ ಚಿತ್ರ
Published On :

ಸಿಕ್ಕಿಂ: ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಸಿಕ್ಕಿನಲ್ಲೂ ಭೂಕಂಪನದ ಅನುಭವವಾಗಿದೆ.

ಸಿಕ್ಕಿಂನ ಉತ್ತರಕ್ಕೆ 70 ಕಿಲೋ ಮೀಟರ್​ ದೂರದಲ್ಲಿರುವ ಯುಕ್ಸೋಮ್‌ ಎಂಬಲ್ಲಿ ಇಂದು ಬೆಳಗಿನ ಜಾವ 4.15 ರ ಸುಮಾರಿಗೆ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 4.3 ರಷ್ಟು ದಾಖಲಾಗಿದೆ.

ಭೂಕಂಪನದ ಕೇಂದ್ರವು ಯುಕ್ಸೋಮ್‌ನಿಂದ 70 ಕಿ.ಮೀ ದೂರದಲ್ಲಿದೆ. ಭೂಮಿಯ ಒಳಭಾಗದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಸದ್ಯಕ್ಕೆ ಪ್ರಾಣ ಹಾನಿ ಮತ್ತು ಆಸ್ತಿ-ಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.