ಪಶ್ಚಿಮ ಬಂಗಾಳ: ಜಾತ್ರೆಯಲ್ಲಿ ಬಲೂನ್ ಗೆ ಗ್ಯಾಸ್ ತುಂಬುತ್ತಿದ್ದ ಸಿಲಿಂಡರ್ ಸ್ಫೋಟ, ನಾಲ್ವರು ಸಾವು
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಗ್ರಾಮ ಜಾತ್ರೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬರೀಪುರ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಗ್ರಾಮ ಜಾತ್ರೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಕೋಲ್ಕತ್ತಾದಿಂದ 50 ಕಿಮೀ ದೂರದಲ್ಲಿರುವ ಜೋಯ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ರಾ ಗ್ರಾಮದಲ್ಲಿ ಭಾನುವಾರ ರಾತ್ರಿ 10.10 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಪ್ರಾಥಮಿಕ ವಿಚಾರಣೆಯ ನಂತರ, ಬಲೂನ್ ಮಾರಾಟಗಾರರು ಬಲೂನ್ ಗೆ ಪಂಪ್ ಮಾಡಲು ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಸಾಹಿನ್ ಮೊಲ್ಲಾ(13), ಕುತುಬುದ್ದೀನ್ ಮಿಸ್ತ್ರಿ(35), ಅಬೀರ್ ಗಾಜಿ(8) ಮತ್ತು ಬಲೂನ್ ಮಾರಾಟಗಾರ ಮುಚಿರಾಮ್ ಮೊಂಡಲ್(35) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಬರುಯಿಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


