ಮಧ್ಯಪ್ರದೇಶ: ಮಹಾಶಿವರಾತ್ರಿಯಲ್ಲಿ ಶಿವದೇವಾಲಯದಲ್ಲಿ ಪೂಜೆ ಸಲ್ಲಿಸಲು ದಲಿತರಿಗೆ ನಿರ್ಬಂಧ
ಮಹಾಶಿವರಾತ್ರಿ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಗ್ರಾಮಸ್ಥರನ್ನು ಶಿವ ದೇವಾಲಯದಲ್ಲಿ ಪೂಜೆ ಸಲ್ಲಿಸದಂತೆ ನಿರ್ಬಂಧಿಸಲಾಗಿದೆ.

ಭೋಪಾಲ್: ಮಹಾಶಿವರಾತ್ರಿ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಗ್ರಾಮಸ್ಥರನ್ನು ಶಿವ ದೇವಾಲಯದಲ್ಲಿ ಪೂಜೆ ಸಲ್ಲಿಸದಂತೆ ನಿರ್ಬಂಧಿಸಲಾಗಿದೆ.
ಪ್ರಬಲ ಜಾತಿಯ ಪುರುಷ ಮತ್ತು ಮಹಿಳೆಯರು, ತಮ್ಮ ಕುಟುಂಬ ಪೂಜೆ ಮಾಡದಂತೆ ತಡೆದರು ಮತ್ತು ಇಬ್ಬರು ಬಾಲಕಿಯರು ಸೇರಿದಂತೆ ಸೇರಿದಂತೆ ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಖಾರ್ಗೋನ್ ಜಿಲ್ಲೆಯ ಛೋಟಿ ಕಸ್ರವಾಡ ಗ್ರಾಮದಲ್ಲಿ ಬಲಾಯಿ ಸಮುದಾಯಕ್ಕೆ ಸೇರಿದ ಮಹಿಳೆಯರು ಹೇಳಿದ್ದಾರೆ. ಪ್ರಬಲ ದರ್ಬಾರ್ ಜಾತಿಗೆ ಸೇರಿದವರು, ನಮ್ಮ ಮಕ್ಕಳನ್ನು ದೇವಸ್ಥಾನದಿಂದ ಹೊರ ಹಾಕುವುದಾಗಿ ಬೆದರಿಕೆ ಹಾಕಿದರು ಎಂದು ಶರ್ಮಿಳಾ ಬಾಯಿ ಆರೋಪಿಸಿದ್ದಾರೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದರೂ ಎಫ್‌ಐಆರ್‌ಗೆ ಪ್ರಮುಖ ಆರೋಪಿಯ ಹೆಸರನ್ನು ಸೇರಿಸಿಲ್ಲ ಎಂದು ಭೀಮ್ ಆರ್ಮಿಯ ಸ್ಥಳೀಯ ಮುಖಂಡ ಸುನೀಲ್ ಚೌಹಾಣ್ ಆರೋಪಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಎರಡು ಗುಂಪುಗಳ ಭಕ್ತರ ನಡುವೆ ಜಗಳವಾಗಿತ್ತು. ಒಂದು ಗುಂಪಿನ ದೂರಿನ ಮೇರೆಗೆ ಇನ್ನೊಂದು ಗುಂಪಿನ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮನೋಹರ್ ಸಿಂಗ್ ಗವಾಲಿ ತಿಳಿಸಿದ್ದಾರೆ.
ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅಲ್ಲದೇ, ಐಪಿಸಿ ಸೆಕ್ಷನ್ 294, 323 ಮತ್ತು 34 ರಡಿ ಎಫ್ ಐಆರ್ ದಾಖಲಿಸಲಾಗಿದೆ. ಆದರೆ ಎಫ್‌ಐಆರ್‌ನಲ್ಲಿ ಎಲ್ಲಿಯೂ ದಲಿತ ಮಹಿಳೆಯರು, ಪುರುಷರು ಮತ್ತು ಮಕ್ಕಳನ್ನು ದೇವಸ್ಥಾನದಲ್ಲಿ ಪೂಜೆ ಮಾಡದಂತೆ ತಡೆಯಲಾಗಿದೆ ಎಂದು ಉಲ್ಲೇಖಿಸಲಾಗಿಲ್ಲ. ಬದಲಾಗಿ ಪೂಜೆ ಸಮಯದಲ್ಲಿ ತಳ್ಳಿದ್ದರಿಂದ ಜಗಳ ಉಂಟಾಯಿತು ಎಂದು ಹೇಳಲಾಗಿದೆ.
ಈ ಮಧ್ಯೆ ಪಕ್ಕದ ಖಾಂಡ್ವಾ ಜಿಲ್ಲೆಯ ಭರಡಿ ಗ್ರಾಮ ಪಂಚಾಯತ್‌ನ ಬೈಲವಾಡಿ ಗ್ರಾಮದಲ್ಲಿ, ಮಹಾಶಿವರಾತ್ರಿಯಂದು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ದಲಿತ ಭಕ್ತರನ್ನು ದೇವಾಲಯದ ಅರ್ಚಕರು ತಡೆದಿದ್ದಾರೆ ಎಂದು ವರದಿಯಾಗಿದೆ. ಆದರೆ, ಸ್ಥಳೀಯ ಪೊಲೀಸರ ಮಧ್ಯ ಪ್ರವೇಶದ ನಂತರ ದಲಿತರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


