ಫೆ. 22ಕ್ಕೆ ದೆಹಲಿ ಮೇಯರ್ ಚುನಾವಣೆ
ದೆಹಲಿ ಮೇಯರ್ ಚುನಾವಣೆಯನ್ನು ಫೆಬ್ರವರಿ 22 ರಂದು ನಡೆಸಲು ಮಹಾನಗರ ಪಾಲಿಕೆ ಸಭೆ ಕರೆಯಲು ಲೆಫ್ಟಿನೆಂಟ್ ಗೌವರ್ನರ್ ವಿಕೆ ಸಕ್ಸೇನಾ ಅನುಮತಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.

ನವದೆಹಲಿ: ದೆಹಲಿ ಮೇಯರ್ ಚುನಾವಣೆಯನ್ನು ಫೆಬ್ರವರಿ 22 ರಂದು ನಡೆಸಲು ಮಹಾನಗರ ಪಾಲಿಕೆ ಸಭೆ ಕರೆಯಲು ಲೆಫ್ಟಿನೆಂಟ್ ಗೌವರ್ನರ್ ವಿಕೆ ಸಕ್ಸೇನಾ ಅನುಮತಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
ಅದೇ ದಿನದಿಂದು ಮೇಯರ್ ಚುನಾವಣೆ ನಡೆಸಲು ಅರವಿಂದ್ ಕೇಜ್ರಿವಾಲ್ ಶಿಫಾರಸು ಮಾಡಿದ ಕೆಲ ಗಂಟೆಗಳ ನಂತರ ಲೆಫ್ಟಿನೆಂಟ್ ಗವರ್ನರ್ ಸಮ್ಮತಿ ಸೂಚಿಸಿದ್ದಾರೆ.
ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ದಿನಾಂಕ ನಿಗದಿಪಡಿಸಲು ದೆಹಲಿಯ ಮಹಾನಗರ ಪಾಲಿಕೆಯ ಮೊದಲ ಸಭೆಯನ್ನು ಕರೆಯಲು 24 ಗಂಟೆಗಳ ಒಳಗೆ ನೋಟಿಸ್ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಮೇಯರ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿತ್ತು. ಫೆಬ್ರರಿ 22 ರಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಶಿಫಾರಸು ಮಾಡಲಾಗಿದೆ ಎಂದು ಕೇಜ್ರಿವಾಲ್ ಬೆಳಗ್ಗೆ ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


