ಬಂಗಾಳದಲ್ಲಿ ಕಾಂಗ್ರೆಸ್, ಸಿಪಿಐ(ಎಂ) ಬಿಜೆಪಿಯ ಬಿ ಟೀಂ: ಅಭಿಷೇಕ್ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಎರಡೂ ಪಕ್ಷಗಳು ಸಹಾಯ ಮಾಡುತ್ತಿವೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್...

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಎರಡೂ ಪಕ್ಷಗಳು ಸಹಾಯ ಮಾಡುತ್ತಿವೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಆರೋಪಿಸಿದ್ದಾರೆ.
ಫೆಬ್ರವರಿ 27 ರಂದು ನಡೆಯುವ ಮುರ್ಷಿದಾಬಾದ್‌ನ ಸಾಗರ್ದಿಘಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ರ್ಯಾಲಿ ಉದ್ದೇಶಿಸಿ ಮಾತನಾಡಿದ ಟಿಎಂಸಿ ಸಂಸದ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ಎರಡೂ ಬಿಜೆಪಿಯ ಬಿ ಟೀಮ್ ಆಗಿ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ದೇಶದ್ರೋಹಿ ಎಂದು ಕರೆದ ಅಭಿಷೇಕ್ ಬ್ಯಾನರ್ಜಿ, ಟಿಎಂಸಿ ಅಭ್ಯರ್ಥಿಯನ್ನು ಸೋಲಿಸಲು ವಿರೋಧ ಪಕ್ಷಗಳು ನಡೆಸಿದ ಎಲ್ಲಾ ಪಿತೂರಿಗಳು ವ್ಯರ್ಥವಾಗಲಿವೆ ಎಂದರು.
ಈ ಕ್ಷೇತ್ರವನ್ನು ಕಾಂಗ್ರೆಸ್‌ನ ಹಿಂದಿನ ಭದ್ರಕೋಟೆ ಎಂದು ಪರಿಗಣಿಸಿದ ಬ್ಯಾನರ್ಜಿ, "ಅವರಿಗೆ (ಕಾಂಗ್ರೆಸ್) ಗೆಲ್ಲಲು ಯಾವುದೇ ಅವಕಾಶವಿಲ್ಲ. ಅವರು ಗೆದ್ದರೂ ಅವರ ಶಾಸಕರು 24 ಗಂಟೆಗಳಲ್ಲಿ ಬಿಜೆಪಿಗೆ ಸೇರುತ್ತಾರೆ" ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


