55ವೇ ವಯಸ್ಸಿನಲ್ಲಿ 12ನೇ ತರಗತಿಯ ಪರೀಕ್ಷೆಗೆ ಹಾಜರಾದ ಬಿಜೆಪಿ ನಾಯಕ!
ಬರೇಲಿಯ ಬಿಜೆಪಿ ಮಾಜಿ ಶಾಸಕ ರಾಜೇಶ್ ಮಿಶ್ರಾ ಅಲಿಯಾಸ್ ಪಪ್ಪು ಭರ್ತೋಲ್ ಅವರು ತಮ್ಮ 55ನೇ ವಯಸ್ಸಿನಲ್ಲಿ 12 ನೇ ತರಗತಿ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ.

ಲಖನೌ: ಬರೇಲಿಯ ಬಿಜೆಪಿ ಮಾಜಿ ಶಾಸಕ ರಾಜೇಶ್ ಮಿಶ್ರಾ ಅಲಿಯಾಸ್ ಪಪ್ಪು ಭರ್ತೋಲ್ ಅವರು ತಮ್ಮ 55ನೇ ವಯಸ್ಸಿನಲ್ಲಿ 12 ನೇ ತರಗತಿ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ.
ಎರಡು ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಮಾಜಿ ಶಾಸಕರು ಶಿಕ್ಷಣ ಪಡೆಯಲು ವಯಸ್ಸಿನ ಮಿತಿಯಿಲ್ಲ ಎಂದು ನಂಬಿದ್ದಾರೆ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಕಾನೂನು ಅಧ್ಯಯನ ಮಾಡಲು ಯೋಜಿಸಿದ್ದಾರೆ.
ಎರಡು ವರ್ಷಗಳ ಹಿಂದೆ ರಾಜೇಶ್ ಮಿಶ್ರಾ ಅವರು ತಮ್ಮ ಮಗಳು ದಲಿತ ಯುವಕನನ್ನು ವರಿಸಿ, ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾಗ ಸುದ್ದಿಯಾಗಿದ್ದರು ಮತ್ತು ಅವರ ಕುಟುಂಬವು ಮಗಳ ಈ ಕ್ರಮವನ್ನು ಬಲವಾಗಿ ವಿರೋಧಿಸಿತು.
ವಿಡಿಯೋವನ್ನು ಅಪ್ಲೋಡ್ ಮಾಡಿದ್ದ ಯುವತಿ, ತನ್ನ ಪೋಷಕರಿಗೆ ಇಷ್ಟವಿಲ್ಲದೆ ಮದುವೆಯಾಗಿದ್ದೇನೆ. ದಲಿತ ಯುವಕನನ್ನು ಮದುವೆಯಾಗಿರುವುದಕ್ಕೆ ನಮ್ಮನ್ನು ಬಂಧಿಸುವುದಾಗಿ ಹಾಗೂ ಕೊಲ್ಲುವುದಾಗಿ ತಂದೆ, ಸಹೋದರ ಹಾಗೂ ಅವರ ಸಹವರ್ತಿಗಳು ಬೆದರಿಕೆ ಹಾಕುತ್ತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದರು.
ಮಗಳ ವಿಡಿಯೋ ಮತ್ತು ಮದುವೆ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಜೆಜಿ ಶಾಸಕ ರಾಜೇಶ್ ಮಿಶ್ರಾ, ನನ್ನ ಮಗಳು ಅಪ್ರಾಪ್ತಳಲ್ಲ, ಆಕೆಗೆ ಸರಿ ಎನಿಸಿರುವ ನಿರ್ಧಾರವನ್ನು ಆಕೆ ತೆಗೆದುಕೊಂಡಿದ್ದಾಳೆ. ಆಕೆಗೆ ನಾನಾಗಲಿ, ನನ್ನ ಕುಟುಂಬದವರಾಗಲಿ ಯಾವುದೇ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


