ದೇಶ

ಅಸ್ಸಾಂ: ಪತಿ ಮತ್ತು ಅತ್ತೆಯನ್ನು ಕೊಂದು ದೇಹದ ಭಾಗಗಳನ್ನು ಫ್ರೀಜರ್‌ನಲ್ಲಿ ಶೇಖರಿಸಿಟ್ಟಿದ್ದ ಮಹಿಳೆ

ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹದ ಭಾಗಗಳನ್ನು ಕೆಲವು ದಿನಗಳವರೆಗೆ ಫ್ರೀಜರ್‌ನಲ್ಲಿ ಸಂಗ್ರಹಿಸಿ ನಂತರ ನದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಸ್ಸಾಂ: ಪತಿ ಮತ್ತು ಅತ್ತೆಯನ್ನು ಕೊಂದು ದೇಹದ ಭಾಗಗಳನ್ನು ಫ್ರೀಜರ್‌ನಲ್ಲಿ ಶೇಖರಿಸಿಟ್ಟಿದ್ದ ಮಹಿಳೆ
ಸಾಂದರ್ಭಿಕ ಚಿತ್ರ
Published On :

ಗುಹಾವಟಿ: ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹದ ಭಾಗಗಳನ್ನು ಕೆಲವು ದಿನಗಳವರೆಗೆ ಫ್ರೀಜರ್‌ನಲ್ಲಿ ಸಂಗ್ರಹಿಸಿ ನಂತರ ನದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಳು ತಿಂಗಳ ಹಿಂದೆ ನಗರದ ನೂನ್ಮತಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿ ತಪ್ಪೊಪ್ಪಿಕೊಂಡ ನಂತರ ಸೋಮವಾರವಷ್ಟೇ ಈ ಘಟನೆ ಬೆಳಕಿಗೆ ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿ ಪ್ರಕಾರ, ಆರೋಪಿ ಬಂದನಾ ಕಲಿತಾ, ತನ್ನ ಇಬ್ಬರು ಸ್ನೇಹಿತರ ಸಹಾಯದಿಂದ ಪತಿ ಅಮರಜ್ಯೋತಿ ಡೇ ಮತ್ತು ಅತ್ತೆ ಶಂಕರಿ ಡೇ ಅವರನ್ನು 2022ರ ಆಗಸ್ಟ್ 17 ರಂದು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

'ಕೊಲೆ ನಂತರ, ಬಂದನಾ ಅವರು ಸಂತ್ರಸ್ತರ ದೇಹದ ಭಾಗಗಳನ್ನು ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿ ಮನೆಯಿಂದ ಹೊರಟುಹೋಗಿದ್ದಾರೆ. ಅದಾದ ನಾಲ್ಕು ದಿನಗಳ ನಂತರ ಆಗಸ್ಟ್ 21 ರಂದು ಮನೆಗೆ ಹಿಂದಿರುಗಿದ್ದಾರೆ ಮತ್ತು ಗುವಾಹಟಿಯಿಂದ ಕನಿಷ್ಠ 200 ಕಿಮೀ ದೂರದಲ್ಲಿರುವ ಮೇಘಾಲಯದ ದವ್ಕಿ ನದಿಗೆ ದೇಹದ ತುಂಡುಗಳನ್ನು ಎಸೆದಿದ್ದಾರೆ' ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಕಲಿತಾ ಅವರ ನೆರೆಹೊರೆಯವರು ಆಕೆಯ ಮನೆಯ ಟೆರೇಸ್‌ನಲ್ಲಿ ಪೀಠೋಪಕರಣಗಳನ್ನು ಸುಡುವುದನ್ನು ನೋಡಿರುವುದಾಗಿ ಖಚಿತಪಡಿಸಿದ್ದಾರೆ.

ಕಲಿತಾ ಅವರ ಇಬ್ಬರು ಸ್ನೇಹಿತರಾದ ಅರುಪ್ ದೇಕಾ ಮತ್ತು ಧಂಜಿತ್ ದೇಕಾ ಅವರನ್ನು ಕೊಲೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬಂಧಿಸಲಾಗಿದೆ. 

ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.