ರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ'; ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!
ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ' ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ.

ನವದೆಹಲಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ' ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ.
ವಾಯವ್ಯ ದೆಹಲಿಯ ಅಮನ್ ವಿಹಾರ್‌ನಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಫೆಬ್ರವರಿ 11 ರಂದು, ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಎಸ್‌ಜಿಎಂ ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಸ್ಪತ್ರೆಗೆ ತಲುಪಿದಾಗ, ಮಹಿಳೆ ತನ್ನ ಹೇಳಿಕೆಯನ್ನು ದಾಖಲಿಸಲು ವಿಫಲರಾಗಿದ್ದರು. ಬಳಿಕೆ ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಯಿತು. ಆದರೆ ಬಳಿಕ ಆಕೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಮೃತ ಮಹಿಳೆಯನ್ನು ವಾಯುವ್ಯ ದೆಹಲಿಯ ಬಲ್ಬೀರ್ ವಿಹಾರ್ ನಿವಾಸಿ ಎಂದು ಗುರುತಿಸಲಾಗಿದ್ದು, ಆಕೆ ಪಾದರಕ್ಷೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಮಹಿಳೆ ತನ್ನ ಪತಿಯನ್ನು ತೊರೆದು ಕಳೆದ ಆರು ವರ್ಷಗಳಿಂದ ಆರೋಪಿ ಮೋಹಿತ್ ಎಂಬಾತನನ್ನು ಪ್ರೀತಿಸಿ ಆತನೊಂದಿಗೆ ಲಿವ್ ಇನ್ ಸಂಬಂಧದದಲ್ಲಿದ್ದಳು. ಅಲ್ಲದೆ ಆರೋಪಿಯೊಂದಿಗೆ ವಾಸಿಸುತ್ತಿದ್ದಳು. ಮಹಿಳೆಗೆ ತನ್ಮ ಮೊದಲ ಮದುವೆಯಿಂದ ಒಂದು ಮತ್ತು ಮೋಹಿತ್ ನಿಂದ ಒಂದು ಮಗು ಅಂದರೆ ಒಟ್ಟು 2 ಮಕ್ಕಳು ಇದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡ್ರಗ್ಸ್ ವಿವಾದ ಕೊಲೆಯಲ್ಲಿ ಅಂತ್ಯ
ಪೊಲೀಸ್ ಮೂಲಗಳ ಪ್ರಕಾರ ಮೃತ ಮಹಿಳೆ ಮತ್ತು ಆರೋಪಿ ಮೋಹಿತ್ ನಡುವೆ ಡ್ರಗ್ಸ್ ವಿಚಾರಕ್ಕೆ ಗಲಾಟೆಯಾಗಿದ್ದು, ಈ ಗಲಾಟೆ ವಿಕೋಪಕ್ಕೆ ತಿರುಗೆ ಮೋಹಿತ್ ಆಕೆಯನ್ನು ಸುಟ್ಟು ಕೊಂದಿದ್ದಾನೆ. ಫೆಬ್ರವರಿ 10 ರಂದು ರಾತ್ರಿ ಮೋಹಿತ್ ತನ್ನ ಸ್ನೇಹಿತರೊಂದಿಗೆ ಸೇರಿ ಡ್ರಗ್ಸ್ ಸೇವಿಸುತ್ತಿರುವುದನ್ನು ಕಂಡು ಮಹಿಳೆ ಜಗಳ ಮಾಡಿದ್ದಳು. ಈ ವೇಳೆ ಜಗಳ ತಾರಕಕ್ಕೇರಿ ಆರೋಪಿ ಮೋಹಿತ್ ಆಕೆಯ ಮೇಲೆ 'ಟರ್ಪಂಟೈನ್ ಆಯಿಲ್' ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಮೋಹಿತ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಅಂತೆಯೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


