ದೇಶ

ಪಾಕಿಸ್ತಾನ: ರಾವಲ್ಪಿಂಡಿಯಲ್ಲಿ ಕಾಶ್ಮೀರದ ಹಿಜ್ಬುಲ್ ಕಮಾಂಡರ್ ಗುಂಡಿಕ್ಕಿ ಹತ್ಯೆ 

ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್‌ನ ಸ್ವಯಂಘೋಷಿತ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಪಾಕಿಸ್ತಾನ: ರಾವಲ್ಪಿಂಡಿಯಲ್ಲಿ ಕಾಶ್ಮೀರದ ಹಿಜ್ಬುಲ್ ಕಮಾಂಡರ್ ಗುಂಡಿಕ್ಕಿ ಹತ್ಯೆ 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್‌ನ ಸ್ವಯಂಘೋಷಿತ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯವರಾದ ಪೀರ್, 15 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದರು ಎಂದು ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ. ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಅವರನ್ನು ಸೋಮವಾರ ರಾವಲ್ಪಿಂಡಿಯ ಅಂಗಡಿಯೊಂದರ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಪಾಕ್ ಮಾಧ್ಯಮಗಳು ವರದಿ ಮಾಡಿವೆ. 

ಗಡಿ ನಿಯಂತ್ರಣ ರೇಖೆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಭಯೋತ್ಪಾದಕರನ್ನು ಕಳುಹಿಸುವ  ಉಸ್ತುವಾರಿ ವಹಿಸಿದ್ದ ಪೀರ್, ಭಯೋತ್ಪಾದಕ ಚಟುವಟಿಕೆಗಳಲ್ಲಿ ವಹಿಸಿದ್ದ ಪಾತ್ರಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಕಳೆದ ವರ್ಷ ಅಕ್ಟೋಬರ್ 4 ರಂದು ಆತನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಹೆಸರಿಸಿತ್ತು. 

ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಎ-ತೈಬಾ ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ಚಟುವಟಿಕೆಗಳ ವಿಸ್ತರಣೆಗಾಗಿ ಮಾಜಿ ಉಗ್ರಗಾಮಿಗಳು ಮತ್ತು ಇತರ ಕಾರ್ಯಕರ್ತರನ್ನು ಒಗ್ಗೂಡಿಸಲು ಪೀರ್ ಹಲವಾರು ಆನ್‌ಲೈನ್ ಪ್ರಚಾರ ಗುಂಪುಗಳಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.