ಸಂಸತ್ ಭವನದಲ್ಲಿರುವ ಶಿವಸೇನೆ ಕಚೇರಿ ಶಿಂಧೆ ಬಣಕ್ಕೆ ಹಂಚಿಕೆ
ಸಂಸತ್ ಭವನದಲ್ಲಿರುವ ಶಿವಸೇನೆ ಕಚೇರಿಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಲೋಕಸಭೆ ಸಚಿವಾಲಯ ಮಂಗಳವಾರ ತಿಳಿಸಿದೆ.

ನವದೆಹಲಿ: ಸಂಸತ್ ಭವನದಲ್ಲಿರುವ ಶಿವಸೇನೆ ಕಚೇರಿಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಲೋಕಸಭೆ ಸಚಿವಾಲಯ ಮಂಗಳವಾರ ತಿಳಿಸಿದೆ.
ಶುಕ್ರವಾರ ಚುನಾವಣಾ ಆಯೋಗವು ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿ ಅದಕ್ಕೆ "ಬಿಲ್ಲು ಮತ್ತು ಬಾಣ"ದ ಚಿಹ್ನೆ ನೀಡಿ ಆದೇಶಿಸಿತ್ತು.
ಚುನಾವಣಾ ಆಯೋಗದ ಈ ಆದೇಶ 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ' ಎಂದಿದ್ದ ಉದ್ಧವ್ ಠಾಕ್ರೆ ಅವರು, ಇಸಿ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ಉದ್ಧವ್ ಠಾಕ್ರೆ ಬಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


