ದೇಶ

ಶಿವಸೇನೆ ಕುರಿತು ಚುನಾವಣಾ ಆಯೋಗದ ಆದೇಶ ಎಲ್ಲವನ್ನೂ ಸ್ಪಷ್ಟಪಡಿಸಿದೆ: ಠಾಕ್ರೆಗೆ ಠಾಕೂರ್ ಟಾಂಗ್

ಏಕನಾಥ್ ಶಿಂಧೆ ಬಣದ ಶಿವಸೇನೆಯೆ ನಿಜವಾದ ಶಿವಸೇನೆ ಎಂಬ ಚುನಾವಣಾ ಆಯೋಗದ ನಿರ್ಧಾರ ಎಲ್ಲವನ್ನೂ ಸ್ಪಷ್ಟಪಡಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್, ಉದ್ಧವ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ.

ಶಿವಸೇನೆ ಕುರಿತು ಚುನಾವಣಾ ಆಯೋಗದ ಆದೇಶ ಎಲ್ಲವನ್ನೂ ಸ್ಪಷ್ಟಪಡಿಸಿದೆ: ಠಾಕ್ರೆಗೆ ಠಾಕೂರ್ ಟಾಂಗ್
ಕೇಂದ್ರ ಸಚಿವ ಅನುರಾಗ್ ಠಾಕೂರ್
Published On :

ಮುಂಬೈ: ಏಕನಾಥ್ ಶಿಂಧೆ ಬಣದ ಶಿವಸೇನೆಯೆ ನಿಜವಾದ ಶಿವಸೇನೆ ಎಂಬ ಚುನಾವಣಾ ಆಯೋಗದ ನಿರ್ಧಾರ ಎಲ್ಲವನ್ನೂ ಸ್ಪಷ್ಟಪಡಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್, ಉದ್ಧವ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ.

ಪಕ್ಷದ ಕಾರ್ಯಕರ್ತರ ಬೆಂಬಲ ಯಾರೆಡೆಗೆ ಇದೆ ಎಂಬುದನ್ನು ಮಹಾರಾಷ್ಟ್ರದ ಮಾಜಿ ಸಿಎಂ ಠಾಕ್ರೆ ಅರ್ಥ ಮಾಡಿಕೊಳ್ಳಬೇಕೆಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಕಳೆದುಕೊಂಡಿದ್ದರ ಬಗ್ಗೆ ಪಶ್ಚಾತ್ತಾಪಪಟ್ಟು ಪ್ರಯೋಜನವಿಲ್ಲ ಎಂದು ಠಾಕ್ರೆಗೆ ಠಾಕೂರ್ ಹೇಳಿದ್ದಾರೆ. ಶಿವಸೇನೆಯ ಮೇಲಿನ ಹಿಡಿತಕ್ಕೆ ಸಂಬಂಧಿಸಿದಂತೆ ಠಾಕ್ರೆ-ಏಕನಾಥ್ ಶಿಂಧೆ ಬಣದ ನಡುವೆ ಕಾನೂನು ಸಮರ ನಡೆದಿತ್ತು.

ಇದನ್ನೂ ಓದಿ: 'ಮೊಗಾಂಬೋ ಖುಷ್ ಹುವಾ': ಶಿವಸೇನೆಯ ಬಿಲ್ಲು ಬಾಣ ಕಳೆದುಕೊಂಡ ನಂತರ ಅಮಿತ್ ಶಾಗೆ ಉದ್ಧವ್ ಠಾಕ್ರೆ ಟಾಂಗ್!
 
ಶಿವಸೇನೆಯ ಸಂಖ್ಯಾಬಲವೇ ಎಲ್ಲಾ ಕಥೆಗಳನ್ನೂ ಹೇಳುತ್ತದೆ ಎಂದು ಠಾಕೂರ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.