ಉತ್ತರ ಪ್ರದೇಶದಲ್ಲಿ 27 ಲಕ್ಷ ರೂಪಾಯಿ ನಕಲಿ ನೋಟು ಜಪ್ತಿ; ಮೂವರ ಬಂಧನ
ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಅವರ ಬಳಿಯಿದ್ದ 27 ಲಕ್ಷ ರೂಪಾಯಿಯ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು(ಎಫ್‌ಐಸಿಎನ್) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬರೇಲಿ: ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಅವರ ಬಳಿಯಿದ್ದ 27 ಲಕ್ಷ ರೂಪಾಯಿಯ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು(ಎಫ್‌ಐಸಿಎನ್) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹರ್ವಾನ್ಸಿ ಸಿಂಗ್ ಅಲಿಯಾಸ್ ಸೋನು, ಗುರ್ನಾಮ್ ಮತ್ತು ಸದ್ದಾಂ ಹುಸೇನ್ ಅವರನ್ನು ಗುರುವಾರ ಭರ್ಪಾರ ಖುಜಾರಿಯಾ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಮೂವರ ಬಳಿ 27 ಲಕ್ಷ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಗೆ ನೇಪಾಳ, ದೆಹಲಿ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ಸಂಪರ್ಕವಿರುವುದು ವಿಚಾರಣೆ ವೇಳೆ ಪತ್ತೆಯಾಗಿದೆ ಎಂದು ಬರೇಲಿ ಉಪ ಪೊಲೀಸ್ ಮಹಾನಿರೀಕ್ಷಕ ಅಖಿಲೇಶ್ ಚೌರಾಸಿಯಾ ಅವರು ಹೇಳಿದ್ದಾರೆ.
ವಿಶೇಷ ಕಾರ್ಯಪಡೆ ಮತ್ತು ಸ್ಥಳೀಯ ಪೊಲೀಸರ ಜಂಟಿ ತಂಡ ಈ ಮೂವರು ಆರೋಪಿಗಳನ್ನು ಬಂಧಿಸಿದೆ. ಈ ಗ್ಯಾಂಗ್ 1 ಲಕ್ಷ ರೂಪಾಯಿ ನೈಜ ನೋಟುಗಳನ್ನು 3 ಲಕ್ಷ ರೂಪಾಯಿ ನಕಲಿ ನೋಟು ನೀಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


