ದೆಹಲಿ ಮಹಾನಗರ ಪಾಲಿಕೆಯಲ್ಲಿ ಹಿಂಸಾಚಾರಕ್ಕೆ ಎಎಪಿ 'ವಿಲನ್' ಅತಿಶಿ ಕಾರಣ: ಬಿಜೆಪಿ
ಎಎಪಿ ಶಾಸಕ ಅತಿಶಿ ಅವರನ್ನು "ಖಳನಾಯಕಿ" ಎಂದು ಕರೆದಿರುವ ಬಿಜೆಪಿ, ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಯ ಆರು ಸದಸ್ಯರ ಸ್ಥಾಯಿ ಸಮಿತಿ ಚುನಾವಣೆ ವೇಳೆ ಸದನದಲ್ಲಿ ನಡೆದ ಗಲಾಟೆಗೆ ಆಪ್ ಶಾಸಕಿಯೇ ಕಾರಣ ಎಂದು ಶನಿವಾರ...

ನವದೆಹಲಿ: ಎಎಪಿ ಶಾಸಕ ಅತಿಶಿ ಅವರನ್ನು "ಖಳನಾಯಕಿ" ಎಂದು ಕರೆದಿರುವ ಬಿಜೆಪಿ, ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಯ ಆರು ಸದಸ್ಯರ ಸ್ಥಾಯಿ ಸಮಿತಿ ಚುನಾವಣೆ ವೇಳೆ ಸದನದಲ್ಲಿ ನಡೆದ ಗಲಾಟೆಗೆ ಆಪ್ ಶಾಸಕಿಯೇ ಕಾರಣ ಎಂದು ಶನಿವಾರ ತರಾಟೆಗೆ ತೆಗೆದುಕೊಂಡಿದೆ.
ದೆಹಲಿ ಮೇಯರ್ ಶೆಲ್ಲಿ ಒಬೆರಾಯ್ ಅವರೊಂದಿಗೆ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರಾದ ಅತಿಶಿ ಮತ್ತು ದುರ್ಗೇಶ್ ಪಾಠಕ್ ಅವರ ಮಾರ್ಫ್ ಮಾಡಿದ ಚಿತ್ರಗಳಿರುವ ಅಣಕು ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿರುವ ದೆಹಲಿ ಬಿಜೆಪಿ, "ಸದನದಲ್ಲಿ ಹಿಂಸಾಚಾರ ನಡೆಸಿದ್ದು ಮತ್ತು ಸರ್ವಾಧಿಕಾರಿ ರೀತಿ ವರ್ತಿಸಿದ್ದು ಎಎಪಿಯ 'ಖಳನಾಯಕ'ರು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದೆ.
ಈ ಬಗ್ಗೆ ಶಾಸಕಿಯಿಂದ ಅಥವಾ ಎಎಪಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಹೌಸ್ ಬಿಜೆಪಿ ಕೌನ್ಸಿಲರ್‌ಗಳ ಭಾರೀ ಪ್ರತಿಭಟನೆಗೆ ಸಾಕ್ಷಿಯಾದ ನಂತರ ಚುನಾವಣೆಯ ಸಮಯದಲ್ಲಿ ಚಲಾಯಿಸಿದ ಮತವನ್ನು "ಅಸಿಂಧು" ಎಂದು ಘೋಷಿಸಲಾಗಿದೆ.
ಶುಕ್ರವಾರ ಪ್ರಮುಖ ಆರು ಸದಸ್ಯರ ಸ್ಥಾಯಿ ಸಮಿತಿಗೆ ನಡೆದ ಚುನಾವಣೆ ವೇಳೆ ಮೇಯರ್ ಶೆಲ್ಲಿ ಒಬೆರಾಯ್ ಒಂದು ಮತವನ್ನು ಅಸಿಂಧುಗೊಳಿಸುತ್ತಿದ್ದಂತೆಯೇ ಉಭಯ ಪಕ್ಷಗಳ ಕೌನ್ಸಿಲರ್ ಗಳು ಕೂಗಾಟದ ನಡುವೆ ಪರಸ್ಪರ ತಳ್ಳಾಟ, ನೂಕಾಟ ನಡೆದು ಹೊಡೆದಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


