ದೇಶ

ದೆಹಲಿ: ಪತ್ನಿ, ಇಬ್ಬರು ಪುತ್ರರನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಪಶ್ಚಿಮ ದೆಹಲಿಯ ಮೋಹನ್‌ ಗಾರ್ಡನ್‌ ಪ್ರದೇಶದಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಭಾನುವಾರ ನಡೆದಿದೆ...

ದೆಹಲಿ: ಪತ್ನಿ, ಇಬ್ಬರು ಪುತ್ರರನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪಶ್ಚಿಮ ದೆಹಲಿಯ ಮೋಹನ್‌ ಗಾರ್ಡನ್‌ ಪ್ರದೇಶದಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಮಾಡಿದ ವ್ಯಕ್ತಿಯನ್ನು ರಾಜೇಶ್(38) ಎಂದು ಗುರುತಿಸಲಾಗಿದ್ದು, ತನ್ನ 35 ವರ್ಷದ ಪತ್ನಿ ಮತ್ತು ನಾಲ್ಕು ತಿಂಗಳ ಹಾಗೂ ಐದು ವರ್ಷದ ಇಬ್ಬರು ಗಂಡು ಮಕ್ಕಳನ್ನು ಕೊಂದಿದ್ದಾನೆ.

ಪತ್ನಿ ಮತ್ತು ಪುತ್ರರನ್ನು ಕೊಂದ ಬಳಿಕ ರಾಜೇಶ್ ತನ್ನ ಕೈ ಮಣಿಕಟ್ಟು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯ ರಾಜೇಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಭಾನುವಾರ ಬೆಳಗ್ಗೆ ತನ್ನ ಆರ್ಥಿಕ ಸಮಸ್ಯೆಗಳ ಕುರಿತು ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದ. ಆತನ ಸ್ನೇಹಿತರು ತಕ್ಷಣ ರಾಜೇಶ್ ಸಹೋದರನಿಗೆ ಮಾಹಿತಿ ನೀಡಿದ್ದಾರೆ. ಅವರು ಬೆಳಗ್ಗೆ 6 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ(ದ್ವಾರಕಾ) ಎಂ ಹರ್ಷ ವರ್ಧನ್ ತಿಳಿಸಿದ್ದಾರೆ.

ಘಟನೆ ನಡೆದಾಗ 75 ವರ್ಷ ಮೇಲ್ಪಟ್ಟ ರಾಜೇಶ್ ಪೋಷಕರು ಮತ್ತೊಂದು ಕೋಣೆಯಲ್ಲಿದ್ದರು ಮತ್ತು ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜೇಶ್ ಜನರಲ್ ಸ್ಟೋರ್ ನಡೆಸುತ್ತಿದ್ದು, ಮೋಹನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.