ನಿತೀಶ್ ಕುಮಾರ್ ಗೆ ಬಿಜೆಪಿ ಬಾಗಿಲು ಶಾಶ್ವತವಾಗಿ ಮುಚ್ಚಿದೆ: ಅಮಿತ್ ಶಾ ಹೇಳಿಕೆ ವಿರುದ್ಧ ಜೆಡಿಯು ಕಿಡಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬಿಜೆಪಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ನಂತರ, ಜೆಡಿಯು ಪಕ್ಷದ ಮುಖ್ಯಸ್ಥ ಮರುಹೊಂದಾಣಿಕೆಗಾಗಿ ಬಿಜೆಪಿ ಪಕ್ಷವನ್ನು ಬೇಡಿಕೊಂಡಿದ್ದಾರೆಯೇ ಎಂದು ಜೆಡಿಯು ಹಿರಿಯ ನಾಯಕ ರಾಜೀವ್ ರಂಜನ್ ಸಿಂಗ್ ಭಾನುವಾರ ಪ್ರಶ್ನಿಸಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬಿಜೆಪಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ನಂತರ, ಜೆಡಿಯು ಪಕ್ಷದ ಮುಖ್ಯಸ್ಥ ಮರುಹೊಂದಾಣಿಕೆಗಾಗಿ ಬಿಜೆಪಿ ಪಕ್ಷವನ್ನು ಬೇಡಿಕೊಂಡಿದ್ದಾರೆಯೇ ಎಂದು ಜೆಡಿಯು ಹಿರಿಯ ನಾಯಕ ರಾಜೀವ್ ರಂಜನ್ ಸಿಂಗ್ ಭಾನುವಾರ ಪ್ರಶ್ನಿಸಿದ್ದಾರೆ.
ಶನಿವಾರ ಬಿಹಾರ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ. ಬಿಜೆಪಿ ತೊರೆದು ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿರುವ ನಿತೀಶ್ ಕುಮಾರ್ ಅವರಿಗೆ ಕೇಸರಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲ್ಪಟ್ಟಿದೆ ಎಂದು ಹೇಳಿದ್ದರು.
ಈ ಹೇಳಿಕೆ ಕುರಿತು ಕಿಡಿಕಾರಿದ ರಾಜೀವ್ ರಂಜನ್ ಸಿಂಗ್, ನಿತೀಶ್ ಕುಮಾರ್ ಮರು ಹೊಂದಾಣಿಕೆಗಾಗಿ ಬಿಜೆಪಿ ಮೊರೆ ಹೋಗಿದ್ದಾರೆಯೇ? ಎಂದು ಪ್ರಶ್ನಿಸಿದರು. 2017 ರಲ್ಲಿ ಪ್ರಧಾನಿ ಮೋದಿ ಮನವೊಲಿಸಿದ ನಂತರವೇ ನಿತೀಶ್ ಕುಮಾರ್ ಎನ್‌ಡಿಎಗೆ ಮರಳಿದರು ಎಂಬುದನ್ನು ಅಮಿತ್ ಶಾ ನೆನಪಿಸಿಕೊಳ್ಳಬೇಕು ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಸಿಂಗ್ ಹೇಳಿದ್ದಾರೆ.
ಅಮಿತ್ ಶಾ ಹೇಳಿದ್ದನ್ನೇ ಪದೇ ಪದೇ ಹೇಳುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿರುವ ಮತ್ತೋರ್ವ ಜೆಡಿಯು ನಾಯಕ ವಿಜಯ್ ಕುಮಾರ್ ಚೌಧರಿ, ಬಿಜೆಪಿಯು ನಿತೀಶ್ ಕುಮಾರ್ ಮತ್ತು ಜೆಡಿಯು ತಮ್ಮ ಪಕ್ಕದಲ್ಲಿಲ್ಲದ ಬಿಸಿಯನ್ನು ಅನುಭವಿಸಲು ಪ್ರಾರಂಭಿಸಿದೆಯೇ ಎಂದು ಪ್ರಶ್ನಿಸಿದರು. ನಿತೀಶ್ ಕುಮಾರ್ ಎನ್‌ಡಿಎಗೆ ಮರಳುವ ಉದ್ದೇಶವನ್ನು ಎಂದಿಗೂ ವ್ಯಕ್ತಪಡಿಸಿಲ್ಲ, ಆದ್ದರಿಂದ ಶಾ ಅವರ ಹೇಳಿಕೆ ಅರ್ಥಹೀನವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


