ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಎಂದರೆ ಭಯ: ಆಮ್ ಆದ್ಮಿ ಪಕ್ಷ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಎಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಯ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಹೇಳಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಎಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಯ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಹೇಳಿದೆ.
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ಕೇಂದ್ರ ತನಿಖಾ ದಳ (ಸಿಬಿ)ದ ಎದುರು ವಿಚಾರಣೆಗೆ ಹಾಜರಾಗಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಕ್ಷ, ಪ್ರಧಾನಿ ಮೋದಿಯವರಿಗೆ ಇಂದು ಅರವಿಂದ ಕೇಜ್ರಿವಾಲ್ ಎಂದರೆ ಭಯಪಡುತ್ತಿದ್ದಾರೆ. ಹೀಗಾಗಿಯೇ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ನಮ್ಮ ಕೌನ್ಸಿಲರ್‌ಗಳು ಮತ್ತು ಶಾಸಕರನ್ನು ಬಿಜೆಪಿಯ ಪೊಲೀಸರು ಬಂಧಿಸಿದ್ದಾರೆ. ಆದರೆ, ನಾವು ದೇಶಕ್ಕಾಗಿ ಒಂದಲ್ಲ, ಸಾವಿರ ಬಾರಿಯಾದರೂ ಬಂಧನಕ್ಕೊಳಗಾಗಲು ಸಿದ್ಧರಿದ್ದೇವೆಂದು ಹೇಳಿದೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿಯ ಪರಿಸರ ಸಚಿವ ಮತ್ತು ಎಎಪಿ ನಾಯಕ ಗೋಪಾಲ್ ರೈ ಅವರು, ಸಿಸೋಡಿಯಾ ಅವರನ್ನು ಬಂಧಿಸಲು ಹೊರಟಿರುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ.
ಸಿಸೋಡಿಯಾ ಅವರೊಂದಿಗೆ ರಾಜ್ ಘಾಟ್‌ಗೆ ಭೇಟಿ ನೀಡುವುದನ್ನು ತಡೆಯಲು ಕೆಲ ಎಎಪಿ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. "ಮೋದಿ ಅವರು ಕೇಜ್ರಿವಾಲ್ ಬಗ್ಗೆ ಬಹಳ ಹೆದರುವುದನ್ನು ನಿಲ್ಲಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


