ದೇಶ

ನವದೆಹಲಿ: ನ್ಯಾಯಾಲಯದ ಮುಂದೆ ಹಾಜರಾದ ಮನೀಶ್ ಸಿಸೋಡಿಯಾ

ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ ನಗರದ ನ್ಯಾಯಾಲಯವೊಂದರ ಮುಂಭಾಗ ಸೋಮವಾರ ಹಾಜರಾದರು.

ನವದೆಹಲಿ: ನ್ಯಾಯಾಲಯದ ಮುಂದೆ ಹಾಜರಾದ ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ
Published On :

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ  ನಗರದ ನ್ಯಾಯಾಲಯವೊಂದರ ಮುಂಭಾಗ ಸೋಮವಾರ ಹಾಜರಾದರು.

 ರೋಸ್ ಅವಿನ್ಯೂ  ವಿಶೇಷ ನ್ಯಾಯಾಧೀಶ ಎಂಕೆ ನಾಗಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಹಾಜರುಪಡಿಸಿದ್ದು, ವಿಚಾರಣೆಗಾಗಿ ಅವರನ್ನು ಐದು ದಿನಗಳ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಕೋರ್ಟ್ ಆವರಣದ ಒಳಗೆ ಹಾಗೂ ಹೊರಗೆ ಬಿಗಿ ಭದ್ರತೆ ಆಯೋಜಿಸಲಾಗಿತ್ತು. 2021-22ಕ್ಕೆ ಈಗ ರದ್ದಾದ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಸಂಜೆ ಸಿಸೋಡಿಯಾ ಅವರನ್ನು ಬಂಧಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.