2023ರಲ್ಲಿ ಸರಣಿ ಅಸೆಂಬ್ಲಿ ಚುನಾವಣೆ: ಲೋಕಸಭಾ ಚುನಾವಣೆಯ 'ಸೆಮಿಫೈನಲ್'
ಈ ವರ್ಷ ನಡೆಯಲಿರುವ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸೆಮಿ ಫೈನಲ್ ಎಂದೇ ಹೇಳಲಾಗುತ್ತಿದೆ.

ನವದೆಹಲಿ: ಈ ವರ್ಷ ನಡೆಯಲಿರುವ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸೆಮಿ ಫೈನಲ್ ಎಂದೇ ಹೇಳಲಾಗುತ್ತಿದೆ. ಈಶಾನ್ಯ ರಾಜ್ಯಗಳು ಅಲ್ಲದೇ ಕರ್ನಾಟಕ, ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ತ್ರಿಪುರಾ, ಮೇಘಾಲಯದಲ್ಲಿ ಫೆಬ್ರವರಿ- ಮಾರ್ಚ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ಮೂರು ರಾಜ್ಯಗಳಲ್ಲಿ ಒಟ್ಟಿಗೆ ಚುನಾವಣೆ ಮುಗಿಸಿದ ನಂತರ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಆಯೋಗ ಉದ್ದೇಶಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಅಂತ್ಯವಾಗಲಿದೆ. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. 2023ರ ಕೊನೆಯಲ್ಲಿ ಅಥವಾ 2024ರ ಜನವರಿಯಲ್ಲಿ ಮಿಜೋರಾಂ, ಛತ್ತೀಸ್ ಗಢ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದ ಶಾಸನಸಭೆಗಳ ಆಡಳಿತಾವಧಿ ಮುಕ್ತಾಯವಾಗಲಿದೆ.
40 ಸದಸ್ಯ ಬಲದ ಮಿಜೋರಾಂ ವಿಧಾನಸಭೆ ಅವಧಿ ಡಿಸೆಂಬರ್ 17ಕ್ಕೆ ಕೊನೆಯಾಗಲಿದ್ದು, ಛತ್ತೀಸ್ ಗಢ ಮತ್ತು ಮಧ್ಯ ಪ್ರದೇಶ ವಿಧಾನಸಭೆಗಳ ಅವಧಿ ಕ್ರಮವಾಗಿ ಜನವರಿ 3, 6, 2024ರಂದು ಅಂತ್ಯವಾಗಲಿದೆ. ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆಗಳ ಅವಧಿ ಕ್ರಮವಾಗಿ ಜನವರಿ 14 ಮತ್ತು 16 ರಂದು ಕೊನೆಯಾಲಿದ್ದು, ಈ ಐದು ರಾಜ್ಯಗಳ ಚುನಾವಣೆ ಒಟ್ಟಿಗೆ ನಡೆಯುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


