ದೇಶದಾದ್ಯಂತ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ‘2023ರ ವರ್ಷವು ನಮ್ಮ ಜೀವನದಲ್ಲಿ ಹೊಸ ಸ್ಫೂರ್ತಿ, ಗುರಿ ಮತ್ತು ಸಾಧನೆಯನ್ನು ತರಲಿ. ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಂತರ್ಗತ ಅಭಿವೃದ್ಧಿಗೆ ನಮ್ಮನ್ನು ನಾವು ಸಮರ್ಪಿಸಿಕೊಳ್ಳಲು ಸಂಕಲ್ಪ ಮಾಡೋಣ’ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ‘2023ರ ವರ್ಷ ನಿಮ್ಮ ಪಾಲಿಗೆ ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ಕೂಡಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗುವಂತಾಗಲಿ ಎಂದು ಆಶಿಸುತ್ತೇನೆ’ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ, ‘2023ರಲ್ಲಿ ಪ್ರತಿ ಬೀದಿ, ಪ್ರತಿ ಹಳ್ಳಿ, ಪ್ರತಿ ನಗರದಲ್ಲಿ ಪ್ರೀತಿಯನ್ನು ಹಂಚುವ ಅಂಗಡಿ ತೆರೆಯಲಿದೆ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


