ಭಾರತ್ ಜೋಡೋ ಯಾತ್ರೆ: ರಾಹುಲ್ ಜೊತೆಗೆ ''ರಾ'' ಮಾಜಿ ಮುಖ್ಯಸ್ಥ ಹೆಜ್ಜೆ
ಚಳಿಗಾಲದಿಂದ ತಾತ್ಕಾಲಿಕವಾಗಿ ವಿರಾಮ ಪಡೆದುಕೊಂಡಿದ್ದ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ' ಪುನರ್ ಆರಂಭವಾಗಿದೆ.

ನವದೆಹಲಿ: ಚಳಿಗಾಲದಿಂದ ತಾತ್ಕಾಲಿಕವಾಗಿ ವಿರಾಮ ಪಡೆದುಕೊಂಡಿದ್ದ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ' ಪುನರ್ ಆರಂಭವಾಗಿದೆ. ರಾಹುಲ್ ಗಾಂಧಿ ಅವರೊಂದಿಗೆ ಬೇಹುಗಾರಿಕಾ ಸಂಸ್ಥೆ 'ರಾ' ಮಾಜಿ ಮುಖ್ಯಸ್ಥ ಎಎಸ್ ದುಲಾತ್ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶ ಪ್ರವೇಶಕ್ಕೂ ಮುನ್ನಾ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು.
ಎಎಸ್ ದುಲಾತ್ ಭಾರತೀಯ ಗುಪ್ತಚರ ಸಂಸ್ಥೆಯ ಮಾಜಿ ವಿಶೇಷ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸೇವೆಯಿಂದ ನಿವೃತ್ತರಾದ ಬಳಿಕ ಪ್ರಧಾನ ಮಂತ್ರಿಗಳ ಕಾರ್ಯಾಲಯದಲ್ಲಿ ಜಮ್ಮು-ಕಾಶ್ಮೀರ ವಿಶೇಷ ಸಲಹೆಗಾರರಾಗಿ ಜನವರಿ 2000ದಿಂದ ಮೇ 2004ರವರೆಗೂ ಕಾರ್ಯ ನಿರ್ವಹಿಸಿದ್ದರು.
ಒಂಬತ್ತು ದಿನಗಳ ವಿರಾಮದ ನಂತರ ಪುನರ್ ಆರಂಭವಾದ ಯಾತ್ರೆಯಲ್ಲಿ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡಾ ಭಾಗವಹಿಸಿದರು. ಭಾರತ್ ಜೋಡೋ ಯಾತ್ರೆ ಇಂದು ಮಧ್ಯಾಹ್ನ ಉತ್ತರ ಪ್ರದೇಶಕ್ಕೆ ಆಗಮಿಸಿತು. ಲೊನಿ ಗಡಿಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯಾತ್ರೆಗೆ ಸ್ವಾಗತ ಕೋರಿದರು.
ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶದಿಂದ ಜನವರಿ 6ಕ್ಕೆ ಹರಿಯಾಣ ತಲುಪಲಿದೆ. ಜನವರಿ 10ರವರೆಗೂ ಹರಿಯಾಣದಲ್ಲಿರುವ ಯಾತ್ರೆ ಜನವರಿ 11 ರಿಂದ 20ರವರೆಗೂ ಪಂಜಾಬ್, ಜನವರಿ 19 ರಂದು ಹಿಮಾಚಲ ಪ್ರದೇಶ ಹಾಗೂ ಜನವರಿ 20 ರಂದು ಜಮ್ಮು-ಕಾಶ್ಮೀರಕ್ಕೆ ತಲುಪಲಿದೆ. ಜನವರಿ 30 ರಂದು ಶ್ರೀನಗರದಲ್ಲಿ ರಾಷ್ಟ್ರ ಧ್ವಜಾರೋಹಣದೊಂದಿಗೆ ಭಾರತ್ ಜೋಡೋ ಯಾತ್ರೆ ಅಂತ್ಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


