ದೇಶ

ಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ

ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ
ರಾಹುಲ್ ಗಾಂಧಿ
Published On :

ಅಯೋಧ್ಯ: ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ.

ರಾಮಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಯಾತ್ರೆಗೆ ರಾಹುಲ್ ಗಾಂಧಿಯನ್ನು 'ಆಶೀರ್ವದಿಸಿದ' ಒಂದು ದಿನದ ನಂತರ ಮಂಗಳವಾರ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಇದೀಗ ಈ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಕಾಲ್ನಡಿಗೆಯಲ್ಲಿ ಸಾಗುತ್ತಿರುವ ಯುವಕನಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ರೈ, ಅವರ ನಡೆಯನ್ನು ಮೆಚ್ಚುತ್ತೇನೆ. ಅದರಲ್ಲಿ ತಪ್ಪೇನೂ ಇಲ್ಲ ಎಂದರು.

ಮಂಗಳವಾರ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಯಾತ್ರೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಆರ್‌ಎಸ್‌ಎಸ್ ಭಾರತ್ ಜೋಡೋ ಯಾತ್ರೆಯನ್ನು ಎಂದಿಗೂ ಖಂಡಿಸಿಲ್ಲ' ಎಂದು ಹೇಳಿದರು.

'ಅವರು ಈ ಕಠಿಣ ವಾತಾವರಣದಲ್ಲಿ ನಡೆಯುತ್ತಿದ್ದಾರೆ ಮತ್ತು ಇದನ್ನು ಪ್ರಶಂಸಿಸಲೇಬೇಕು. ಪ್ರತಿಯೊಬ್ಬರೂ ದೇಶದ ಯಾತ್ರೆ ಮಾಡಬೇಕು ಎಂದು ನಾನು ಹೇಳುತ್ತೇನೆ' ಎಂದು ಹೇಳಿದರು.

ರಾಮಮಂದಿರ ಟ್ರಸ್ಟ್‌ನ ಇನ್ನೊಬ್ಬ ಹಿರಿಯ ಟ್ರಸ್ಟಿ ಗೋವಿಂದ್ ದೇವ್ ಗಿರಿ ಕೂಡ ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದರು.

'ರಾಷ್ಟ್ರವು ಒಗ್ಗಟ್ಟಾಗಿ, ಸದೃಢವಾಗಿ ಮತ್ತು ಸೌಹಾರ್ದಯುತವಾಗಿ ಉಳಿಯುವಂತೆ ಆಶೀರ್ವದಿಸಬೇಕೆಂದು ಶ್ರೀರಾಮನನ್ನು ನಾನು ಪ್ರಾರ್ಥಿಸುತ್ತೇನೆ. ಭಾರತ್ ಜೋಡೋ ಯಾತ್ರೆಯು ಉತ್ತಮ ಘೋಷಣೆಯಾಗಿದ್ದು, ಭಾರತ ಒಂದಾಗಬೇಕು' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.