ದೇಶ

ಪಠಾಣ್ ಚಿತ್ರದ ಪ್ರಚಾರದ ವೇಳೆ ಹಿಂದೂ ಸಂಘಟನೆಗಳಿಂದ ದಾಳಿ; ಪೋಸ್ಟರ್ ಹರಿದು ಪ್ರತಿಭಟನೆ

ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಚಿತ್ರದ ಪ್ರಚಾರ ಕಾರ್ಯಕ್ರಮವನ್ನು ವಿರೋಧಿಸಿ ಅಹ್ಮದಾಬಾದ್ ಮಾಲ್ ಮೇಲೆ ಹಿಂದೂ ಸಂಘಟನೆಗಳು ದಾಳಿ ನಡೆಸಿವೆ.

ಪಠಾಣ್ ಚಿತ್ರದ ಪ್ರಚಾರದ ವೇಳೆ ಹಿಂದೂ ಸಂಘಟನೆಗಳಿಂದ ದಾಳಿ; ಪೋಸ್ಟರ್ ಹರಿದು ಪ್ರತಿಭಟನೆ
ಪಠಾಣ್ ಚಿತ್ರದ ಪ್ರಚಾರದ ವೇಳೆ ಹಿಂದೂ ಗುಂಪಿನಿಂದ ದಾಳಿ
Published On :

ಅಹ್ಮದಾಬಾದ್: ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಚಿತ್ರದ ಪ್ರಚಾರ ಕಾರ್ಯಕ್ರಮವನ್ನು ವಿರೋಧಿಸಿ ಅಹ್ಮದಾಬಾದ್ ಮಾಲ್ ಮೇಲೆ ಹಿಂದೂ ಸಂಘಟನೆಗಳು ದಾಳಿ ನಡೆಸಿವೆ.

ಮಾಲ್ ನಲ್ಲಿ ಹಾಕಲಾಗಿದ್ದ ಪೋಸ್ಟರ್ ನ್ನು ಹರಿದುಹಾಕಿ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಜ.25 ರಂದು ಪಠಾಣ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ಚಿತ್ರ ಬಿಡುಗಡೆಯಾಗಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಪಠಾಣ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿರುವುದು ಹಾಗೂ ಬೇಷರಮ್ ರಂಗ್ ಎಂಬ ಹಾಡು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು ಇಡೀ ಚಿತ್ರವನ್ನು ಬಹಿಷ್ಕರಿಸುವಂತೆ ಸಂಘಟನೆಗಳು ದೇಶಾದ್ಯಂತ ಕರೆ ನೀಡಿವೆ ಹಾಗೂ ಚಿತ್ರ ಬಿಡುಗಡೆಯಾಗಬಾರದು ಎಂದು ಆಗ್ರಹಿಸಿವೆ.

ಅಹ್ಮದಾಬಾದ್ ಅಲ್ಫಾವನ್ ಮಾಲ್ ನಲ್ಲಿ ಈ ಘಟನೆ ನಡೆದಿದ್ದು, ಚಿತ್ರದಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಸಂಗತಿಗಳನ್ನು ಹೊಂದಿರುವುದರಿಂದ ಅದನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.