ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ: ವಿಕೃತಿ ಮೆರೆದ ವ್ಯಕ್ತಿಗಾಗಿ ಪೊಲೀಸರಿಂದ ಶೋಧ
ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಶೋಧಕಾರ್ಯಾಚರಣೆ ನಡೆಸುತ್ತಿದ್ದಾರೆ.

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಶೋಧಕಾರ್ಯಾಚರಣೆ ನಡೆಸುತ್ತಿದ್ದಾರೆ.
ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ವ್ಯಕ್ತಿಯ ದೂರಿನ ಆಧಾರದಲ್ಲಿ ಪೊಲೀಸರು ವಿಮಾನಯಾನ ನಿಯಮಗಳ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಸೆಕ್ಷನ್ 294 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಪತ್ತೆ ಮಾಡಲು ಹಲವು ತಂಡಗಳನ್ನು ರಚಿಸಲಾಗಿದೆ. ಆತನನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ವಿಕೃತಿ ಮೆರೆದ ಪ್ರಯಾಣಿಕನಿಗೆ ಏರ್ ಇಂಡಿಯಾ 30 ದಿನಗಳ ಪ್ರಯಾಣ ನಿಷೇಧವನ್ನು ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


