ದೇಶ

ದೇಶದಲ್ಲಿ ಹೆಚ್ಚಾದ ಕೋವಿಡ್-19 ಭೀತಿ: 188 ಹೊಸ ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 188 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,554ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ದೇಶದಲ್ಲಿ ಹೆಚ್ಚಾದ ಕೋವಿಡ್-19 ಭೀತಿ: 188 ಹೊಸ ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 188 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,554ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,46,79,319 ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 5,30,710ಕ್ಕೆ ಏರಿಕೆಯಾಗಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 0.10ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.12ರಷ್ಟಿದೆ. ಇದೇ ವೇಳೆ ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೂ 4,41,46,055 ಮಂದಿ ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.12 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.