ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಡಿ.ವೈ. ಚಂದ್ರಚೂಡ್
ಸ್ಟ್ಯಾಂಡ್‌ಅಪ್ ಹಾಸ್ಯನಟ ಕುನಾಲ್ ಕಾಮ್ರಾ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣವೊಂದರ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಹಿಂದೆ ಸರಿದಿದ್ದಾರೆ. ಸಿಐಜೆ ನೇತೃತ್ವದ ನ್ಯಾಯಪೀಠ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.

ನವದೆಹಲಿ: ಸ್ಟ್ಯಾಂಡ್‌ಅಪ್ ಹಾಸ್ಯನಟ ಕುನಾಲ್ ಕಾಮ್ರಾ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣವೊಂದರ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಹಿಂದೆ ಸರಿದಿದ್ದಾರೆ. ಸಿಐಜೆ ನೇತೃತ್ವದ ನ್ಯಾಯಪೀಠ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.
''ನಾನು ನೀಡಿದ್ದ ಆದೇಶದ ವಿರುದ್ಧ ಟ್ವೀಟ್ ಮಾಡಿರುವುದರಿಂದ ತಾನಿಲ್ಲದ ನ್ಯಾಯಪೀಠ ಮುಂದೆ ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ಎರಡು ವಾರಗಳ ನಂತರ ನ್ಯಾಯಮೂರ್ತಿ ಪಿಎಸ್ ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ, ಈ ಪ್ರಕರಣದ ವಿಚಾರಣೆ ನಡೆಸಲಿದೆ.
ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಂಧಿತರಾಗಿದ್ದ ಟಿ.ವಿ. ಆ್ಯಂಕರ್ ಅರ್ನಾಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಿದ ಸುಪ್ರೀಂ ತೀರ್ಪನ್ನು ಕುನಾಲ್ ಕಾಮ್ರಾ ಅವರು ಟೀಕೆ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.
ಅರ್ನಬ್ ಗೋಸ್ವಾಮಿ ಅವರ ಕಠಿಣ ಟೀಕಾಕಾರರಾಗಿರುವ ಕುನಾಲ್ ಕಾಮ್ರಾ, ಸಾಮಾಜಿಕ ಜಾಲತಾಣಗಳಲ್ಲಿ ಅರ್ನಾಬ್ ಅವರನ್ನು ಆಗಾಗ್ಗೆ ಟೀಕೆ ಮಾಡುತ್ತಿರುತ್ತಾರೆ. ವಿಮಾನ ಪ್ರಯಾಣದ ವೇಳೆಯೂ ಅವರ ರೇಗಿಸಿ ಹಲವು ವಿಮಾನಯಾನ ಸಂಸ್ಥೆಗಳಿಂದ ನಿಷೇಧ ಕೂಡಾ ಅನುಭವಿಸಿದ್ದರು.
ನ್ಯಾಯಾಂಗ ನಿಂದನೆಗಾಗಿ ಕಾಮ್ರಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಕಾನೂನು ವಿದ್ಯಾರ್ಥಿ ಶ್ರೀರಂಗ್ ಕಟ್ನೇಶ್ವರಕರ್ ಸೇರಿದಂತೆ ಇತರ ಮೂವರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


