ಕೇಸರಿ ಕಳಚಿಟ್ಟು, ಆಧುನಿಕ ಬಟ್ಟೆ ಧರಿಸಿ: ಸಿಎಂ ಯೋಗಿ ಆದಿತ್ಯನಾಥ್ ಗೆ ಕೈ ನಾಯಕ ಒತ್ತಾಯ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೇಸರಿ ಬಟ್ಟೆ ವಿರುದ್ಧ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹುಸೇನ್ ದಳವಾಯಿ ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ.

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೇಸರಿ ಬಟ್ಟೆ ವಿರುದ್ಧ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹುಸೇನ್ ದಳವಾಯಿ ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ.
ಯೋಗಿ ಆದಿತ್ಯನಾಥ್ ಕೇಸರಿ ಬಣ್ಣದ ಬಟ್ಟೆ ಧರಿಸದೆ, ಆಧುನಿಕ ಯುಗದ ಬಣ್ಣ ಬಣ್ಣದ ಬಟ್ಟೆ ಧರಿಸುವಂತೆ ಹೇಳಿದ್ದಾರೆ. ಪ್ರತಿದಿನ ಧರ್ಮದ ಬಗ್ಗೆ ಮಾತನಾಡಬೇಡಿ, ಕೇಸರಿ ಬಟ್ಟೆ ಧರಿಸಬೇಡಿ, ಸ್ವಲ್ಪ ಆಧುನಿಕವಾಗಿ, ಆಧುನಿಕ ವಿಚಾರ ಬೆಳೆಸಿಕೊಳ್ಳಿ ಎಂದು ದಳವಾಯಿ ಹೇಳಿದ್ದಾರೆ.
ಮುಂದಿನ ತಿಂಗಳು ಲಖನೌದಲ್ಲಿ ಆಯೋಜಿಸಲಾಗಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನ ಹಿನ್ನೆಲೆಯಲ್ಲಿ ದೇಶದ ಹೂಡಿಕೆದಾರರನ್ನು ಸೆಳೆಯಲು ಮುಂಬೈಗೆ ಎರಡು ದಿನಗಳ ಭೇಟಿ ನೀಡಿರುವ ಯೋಗಿ ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.
ಮಹಾರಾಷ್ಟ್ರದಿಂದ ಉದ್ಯಮಗಳನ್ನು ಉತ್ತರ ಪ್ರದೇಶಕ್ಕೆ ತೆಗೆದುಕೊಂಡು ಹೋಗುವ ಬದಲು ತನ್ನದೇ ರಾಜ್ಯದಲ್ಲಿ ಹೊಸದಾಗಿ ಉದ್ಯಮಗಳನ್ನು ಯೋಗಿ ಆದಿತ್ಯನಾಥ್ ಆರಂಭಿಸಲಿ ಎಂದು ಕಾಂಗ್ರೆಸ್ ಮುಖಂಡ ಸಲಹೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಉದ್ಯಮಗಳಿಗೆ ಉತ್ತಮ ಸೌಕರ್ಯ ನೀಡಲಾಗಿದೆ. ಆದ್ದರಿಂದ ಇಲ್ಲಿಂದ ಕೈಗಾರಿಕೆಗಳನ್ನು ತೆಗೆದುಕೊಂಡು ಹೋಗುವ ಬದಲು ಅಲ್ಲಿಯೇ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಿ, ಅವುಗಳು ಬೆಳವಣಿಗೆಯಾಗಲು ಪೂರಕ ಪರಿಸರವನ್ನು ಸೃಷಿಸಲಿ ಎಂದು ದಳವಾಯ್ ಸುದ್ದಿಗಾರರಿಗೆ ತಿಳಿಸಿದರು.
ಉದ್ಯಮಗಳು ಆಧುನಿಕತೆಯ ಸಂಕೇತವಾಗಿದ್ದು, ಸಿಎಂ ಯೋಗಿ ಆದಿತ್ಯನಾಥ್ ಕೆಲ ಆಧುನಿಕ ಸಿದ್ಧಾಂತಗಳಿಗೆ ಮುಜುಗರವನ್ನುಂಟು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


