ವಿದೇಶಿ ವಿವಿಗಳು ಭಾರತದಲ್ಲಿ ಕ್ಯಾಂಪಸ್ ಆರಂಭಿಸಲು ಯುಜಿಸಿ ಅನುಮತಿ ಅಗತ್ಯ
ವಿದೇಶಿ ವಿಶ್ವವಿದ್ಯಾಲಯಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ ಅನ್ನು ಆರಂಭಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ದ ಒಪ್ಪಿಗೆ ಪಡೆಯಬೇಕಾಗುತ್ತದೆ ಮತ್ತು ಆರಂಭಿಕ ಅನುಮೋದನೆಯು 10 ವರ್ಷಗಳವರೆಗೆ ಮಾತ್ರ ಇರುತ್ತದೆ...

ನವದೆಹಲಿ: ವಿದೇಶಿ ವಿಶ್ವವಿದ್ಯಾಲಯಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ ಅನ್ನು ಆರಂಭಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ದ ಒಪ್ಪಿಗೆ ಪಡೆಯಬೇಕಾಗುತ್ತದೆ ಮತ್ತು ಆರಂಭಿಕ ಅನುಮೋದನೆಯು 10 ವರ್ಷಗಳವರೆಗೆ ಮಾತ್ರ ಇರುತ್ತದೆ ಎಂದು ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ.
ದೇಶದಲ್ಲಿ ಕ್ಯಾಂಪಸ್‌ಗಳನ್ನು ಹೊಂದಿರುವ ವಿದೇಶಿ ವಿಶ್ವವಿದ್ಯಾಲಯಗಳು ಪೂರ್ಣ ಅವಧಿಯ ಕೋರ್ಸ್ ಗಳನ್ನು ಭೌತಿಕ ಕ್ರಮದಲ್ಲಿ ಮಾತ್ರ ನೀಡಬಹುದು. ಆನ್‌ಲೈನ್ ಅಥವಾ ದೂರಶಿಕ್ಷಣಕ್ಕೆ ಅವಕಾಶ ಇಲ್ಲ ಎಂದು ಜಗದೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ: ಪಿಎಚ್ಡಿ ಪದವಿ: ಯುಜಿಸಿ ಹೊಸ ನಿಯಮಕ್ಕೆ ವಿರೋಧ
'ಭಾರತದಲ್ಲಿ ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳನ್ನು ಆರಂಭಿಸುವ ಮತ್ತು ನಿರ್ವಹಿಸುವ' ಕರಡು ನಿಯಮಗಳನ್ನು ಪ್ರಕಟಿಸಿದ ಕುಮಾರ್, ಈ ವಿಶ್ವವಿದ್ಯಾಲಯಗಳು ತಮ್ಮದೇ ಆದ ಪ್ರವೇಶ ಪ್ರಕ್ರಿಯೆ ಮತ್ತು ಶುಲ್ಕ ರಚನೆಯನ್ನು ರೂಪಿಸಲು ಸ್ವಾತಂತ್ರ್ಯವನ್ನು ಹೊಂದಿವೆ ಎಂದು ಹೇಳಿದರು.
ವಿದೇಶಿ ವಿಶ್ವವಿದ್ಯಾಲಯಗಳು ತಮ್ಮ ಭಾರತೀಯ ಕ್ಯಾಂಪಸ್‌ಗಳಲ್ಲಿ ನೀಡುವ ಶಿಕ್ಷಣದ ಗುಣಮಟ್ಟವು ಅವರ ಮುಖ್ಯ ಕ್ಯಾಂಪಸ್‌ಗೆ ಸಮನಾಗಿರುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


