ಉಗ್ರರ ಹುಟ್ಟಡಗಿಸಿದ ಸೇನೆ: ಪೂಂಚ್ ಎನ್ಕೌಂಟರ್ ನಲ್ಲಿ ಇಬ್ಬರು ಶಂಕಿತರು ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಭಾನುವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಭಾನುವಾರ ಇಬ್ಬರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿದಾಟಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಇದನ್ನೂ ಓದಿ: ಹೊಸ ಉಗ್ರ ಸಂಘಟನೆ ಸ್ಥಾಪಿಸಲು ಸಂಚು ರೂಪಿಸಿದ್ದ ಅಸ್ಸಾಂ ಮಾಜಿ ಶಾಸಕ ಸೇರಿ ಮೂವರ ಬಂಧನ
ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಶನಿವಾರ ತಡರಾತ್ರಿ ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಮುಂದಿರುವ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಈ ವೇಳೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅವರು ಹೇಳಿದರು.
ಇಂದು ಬೆಳಗ್ಗೆ ಸೇನೆಯು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಹತರಾದ ಭಯೋತ್ಪಾದಕರ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


