ಜೋಶಿ ಮಠ ಭೂ ಕುಸಿತ: ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ, ಎಲ್ಲಾ ಸಹಕಾರದ ಭರವಸೆ
ಜೋಶಿಮಠದಲ್ಲಿ ಭೂ ಕುಸಿತ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ.

ನವದೆಹಲಿ: ಜೋಶಿಮಠದಲ್ಲಿ ಭೂ ಕುಸಿತ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಜೋಶಿಮಠದಲ್ಲಿನ ಪರಿಸ್ಥಿತಿ ಬಗ್ಗೆ ವಿಚಾರಿಸಿದರು. ಜನರ ಸುರಕ್ಷತೆ ಮತ್ತು ಪುನರ್ವಸತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾಗಿ ಧಾಮಿ ಹೇಳಿದ್ದಾರೆ.
ಜೋಶಿಮಠದಲ್ಲಿನ ಪರಿಸ್ಥಿತಿಯನ್ನು ವಿಶ್ಲೇಷಿಸಲಾಗುತ್ತಿದೆ. ಉತ್ತರಾಖಂಡ್ ನ ಇತರ ಪಟ್ಟಣಗಳ ಬಗ್ಗೆಯೂ ಪರಿಸ್ಥಿತಿಯನ್ನು ಅವಲೋಕಿಸಲಾಗುವುದು ಎಂದ ಅವರು, ಜೋಶಿ ಮಠ ರಕ್ಷಣೆಗಾಗಿ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ್ ಸಿಎಂ ಹೇಳಿದರು.
ಉತ್ತರಾಖಂಡ್ ನ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಭೂ ಕುಸಿತ ಮುಂದುವರೆದಿರುವಂತೆಯೇ, ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಪ್ರಧಾನಮಂತ್ರಿ ಕಾರ್ಯಾಲಯ ಭಾನುವಾರ ಹೇಳಿದೆ. ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ, ಕ್ಯಾಬಿನೆಟ್ ಕಾರ್ಯದರ್ಶಿ, ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಉತ್ತರಾಖಂಡ್ ನ ಹಿರಿಯ ಅಧಿಕಾರಿಗಳು ಕೂಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಸ್ಥಿತಿ ಪರಾಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಳೆದ ಕೆಲವು ದಿನಗಳಿಂದ ಪರ್ವತ ಪ್ರದೇಶದಲ್ಲಿ ಭೂ ಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


