ಉತ್ತರಾಖಂಡದ ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಣೆ: 60ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ
ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಿಸಲಾಗಿದ್ದು ಕುಸಿಯುತ್ತಿರುವ ಪಟ್ಟಣದಲ್ಲಿ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡೆಹ್ರಾಡೂನ್: ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಿಸಲಾಗಿದ್ದು ಕುಸಿಯುತ್ತಿರುವ ಪಟ್ಟಣದಲ್ಲಿ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳೀಯ ಆಡಳಿತವು ಹಿಮಾಲಯ ಪಟ್ಟಣದಲ್ಲಿ ನಾಲ್ಕೈದು ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಇನ್ನು ಇಂದು 60ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ ಎಂದು ಗರ್ವಾಲ್ ಕಮಿಷನರ್ ಸುಶೀಲ್ ಕುಮಾರ್ ತಿಳಿಸಿದ್ದಾರೆ.
ಏತನ್ಮಧ್ಯೆ, ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ಹಿಮಾಂಶು ಖುರಾನಾ ಪೀಡಿತ ಪ್ರದೇಶದಲ್ಲಿನ ಮನೆಗಳಿಗೆ ತೆರಳಿ ಹಾನಿಯ ಪ್ರಮಾಣವನ್ನು ನಿರ್ಣಯಿಸಿದರು. ಇದೇ ವೇಳೆ ಬಿರುಕು ಬಿಟ್ಟ ಮನೆಗಳಲ್ಲಿ ವಾಸಿಸುವ ಜನರಿಗೆ ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಮನವಿ ಮಾಡಿದರು.
ವಾಸಯೋಗ್ಯವಲ್ಲದ ಮನೆಗಳಲ್ಲಿ ವಾಸಿಸುವ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನು ಕನಿಷ್ಠ 90 ಕುಟುಂಬಗಳನ್ನು ಆದಷ್ಟು ಬೇಗ ಸ್ಥಳಾಂತರಿಸಬೇಕಾಗುತ್ತದೆ ಎಂದು ಕುಮಾರ್ ತಿಳಿಸಿದ್ದಾರೆ.
ಗುರುವಾರದಿಂದ ಜೋಶಿಮಠದಲ್ಲಿ ಮೊಕ್ಕಾಂ ಹೂಡಿರುವ ಕುಮಾರ್, ನೆಲಮಟ್ಟದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಜೋಶಿಮಠದಲ್ಲಿ ಒಟ್ಟು 4,500 ಕಟ್ಟಡಗಳಿದ್ದು, ಇವುಗಳಲ್ಲಿ 610 ಕಟ್ಟಡಗಳು ದೊಡ್ಡ ಬಿರುಕುಗಳು ಬಿಟ್ಟಿದ್ದು ವಾಸಕ್ಕೆ ಯೋಗ್ಯವಾಗಿಲ್ಲ ಎಂದು ಅವರು ಹೇಳಿದರು.
ಸಮೀಕ್ಷೆ ನಡೆಯುತ್ತಿದ್ದು, ಹಾನಿಗೊಳಗಾದ ಕಟ್ಟಡಗಳ ಸಂಖ್ಯೆ ಹೆಚ್ಚಾಗಬಹುದು. ಈ ಹಿಂದೆ ಬಿರುಕು ಬಿಟ್ಟಿರುವ ಮನೆಗಳು ಮತ್ತು ಇತ್ತೀಚೆಗೆ ಹಾನಿಗೊಳಗಾದ ಮನೆಗಳು ಸೇರಿದಂತೆ ಪೀಡಿತ ಪ್ರದೇಶವು 1.5 ಕಿ.ಮೀವರೆಗೆ ಬಿರುಕು ಬಿಟ್ಟಿದೆ ಎಂದು ಕುಮಾರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


