ಜಮ್ಮು-ಕಾಶ್ಮೀರ: ಸುಧಾರಿತ ಸ್ಫೋಟಕ ಸಾಧನ ವಶ, ತಪ್ಪಿದ ಭಾರಿ ದುರಂತ!
ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸಮಯಕ್ಕೆ ಸರಿಯಾಗಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನವನ್ನು( ಐಇಡಿ) ನಿಷ್ಕ್ರೀಯಗೊಳಿಸಿದ್ದರಿಂದ ಭಾನುವಾರ ಸಂಜೆ ಸಂಭಾವ್ಯ ದೊಡ್ಡ ದುರಂತವೊಂದು ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಜೌರಿ: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸಮಯಕ್ಕೆ ಸರಿಯಾಗಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನವನ್ನು( ಐಇಡಿ) ನಿಷ್ಕ್ರೀಯಗೊಳಿಸಿದ್ದರಿಂದ ಭಾನುವಾರ ಸಂಜೆ ಸಂಭಾವ್ಯ ದೊಡ್ಡ ದುರಂತವೊಂದು ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬುಧಾಲ್ ಪ್ರದೇಶದ ದಂಡೋಟೆ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ವೇಳೆ ಐಇಡಿ ಪತ್ತೆಯಾಗಿದ್ದು, ಕೂಡಲೇ ಅದನ್ನು ನಿಷ್ಕ್ರೀಯಗೊಳಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
ಧಂಗ್ರಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಏಳು ನಾಗರಿಕರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದರು. ಈ ದಾಳಿ ಬಳಿಕ ರಜೌರಿಯಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಶೋಧ ಕಾರ್ಯಾಚರಣೆ ವೇಳೆ ಐಇಡಿ ನಿಷ್ಕ್ರೀಯಗೊಳಿಸಿರುವುದನ್ನು ರಜೌರಿ ಹಿರಿಯ ಪೊಲೀಸ್ ಅಧೀಕ್ಷಕ ಮೊಹಮ್ಮದ್ ಅಸ್ಲಾಮ್ ದೃಢಪಡಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳದ ತಜ್ಞರು ಸ್ಫೋಟ ಸಂಭವಿಸದಂತೆ ಐಇಡಿಯನ್ನು ನಿಷ್ಕ್ರೀಯಗೊಳಿಸಿದ್ದಾಗಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


