ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ರಾಕೇಶ್ ಟಿಕಾಯತ್
ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಸೇರಿದಂತೆ ರೈತರ ನಿಯೋಗ ಸೋಮವಾರ ಹರಿಯಾಣದ ಕುರುಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆ.

ಕುರುಕ್ಷೇತ್ರ: ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಸೇರಿದಂತೆ ರೈತರ ನಿಯೋಗ ಸೋಮವಾರ ಹರಿಯಾಣದ ಕುರುಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆ.
ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರನ್ನು ರಾಕೇಶ್ ಟಿಕಾಯತ್ ಅವರು ಭೇಟಿ ಚರ್ಚಿಸಿದರು.
ಈ ಹಿಂದೆ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಯಾತ್ರೆಯಲ್ಲಿ ಭಾಗವಹಿಸುವಂತೆ ರಾಕೇಶ್ ಟಿಕಾಯತ್ ಅವರಿಗೆ ಕಾಂಗ್ರೆಸ್ ಆಹ್ವಾನ ನೀಡಿತ್ತು. ಆದರೆ, ರಾಕೇಶ್ ಟಿಕಾಯತ್ ಯಾತ್ರೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದರು.
ಬಿಕೆಯು ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಯಾತ್ರೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಕಾರ್ಯಕರ್ತರು ಭಾಗವಹಿಸಲು ಮುಕ್ತರಾಗಿದ್ದಾರೆ. ಆದರೆ ಜಿಲ್ಲಾ ಅಧ್ಯಕ್ಷರ ಶ್ರೇಣಿಗಿಂತ ಹೆಚ್ಚಿನ ಹುದ್ದೆ ಹೊಂದಿರುವವರು ಅದರಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


