ಪಾಲ್ಘರ್: ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳ್ಳತನ
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ದಾಪೋಲಿ ಗ್ರಾಮದ ರೇಣುಕಾ ಮಾತಾ ಮಂದಿರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ದೇವಸ್ಥಾನದ ಬಾಗಿಲಿನ ಬೀಗ ಒಡೆದಿರುವುದು ಮತ್ತು ಹಣದ ಪೆಟ್ಟಿಗೆ ಹಾಗೂ ದೇವಿಯ ವಿಗ್ರಹದ ಬೆಳ್ಳಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿದೆ.
ಅರ್ಚಕರು ನೀಡಿರುವ ದೂರಿನ ಆಧಾರದ ಮೇಲೆ, ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 380 (ಕಳ್ಳತನ) ಮತ್ತು 457 (ಅಪರಾಧ ಮಾಡುವ ಸಲುವಾಗಿ ರಾತ್ರಿಯಲ್ಲಿ ಮನೆ ಒಡೆಯುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಾಲ್ಘರ್ ಜಿಲ್ಲೆಯ ಗ್ರಾಮೀಣ ನಿಯಂತ್ರಣ ಕೊಠಡಿಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎಂ. ಪವಾರ್ ಹೇಳಿದ್ದಾರೆ.
ಆರೋಪಿಗಳನ್ನು ಪತ್ತೆ ಹಚ್ಚುವ ಪ್ರಯತ್ನ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


