ದೇಶ

ದೆಹಲಿ: ಲಿಫ್ಟ್​ ಕುಸಿದು ಮೂವರು ಸ್ಥಳದಲ್ಲೇ ಸಾವು

ಪಶ್ಚಿಮ ದೆಹಲಿಯ ನರೈನಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯೊಳಗಿನ ಲಿಫ್ಟ್ ಕುಸಿದು ನಿನ್ನೆ ಸಂಜೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.

ದೆಹಲಿ: ಲಿಫ್ಟ್​ ಕುಸಿದು ಮೂವರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
Published On :

ದೆಹಲಿ: ಪಶ್ಚಿಮ ದೆಹಲಿಯ ನರೈನಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯೊಳಗಿನ ಲಿಫ್ಟ್ ಕುಸಿದು ನಿನ್ನೆ ಸಂಜೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.

ಗುಟ್ಕಾ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಕುಲವಂತ್ ಸಿಂಗ್, 30, ದೀಪಕ್ ಕುಮಾರ್, 26, ಮತ್ತು ಸನ್ನಿ (33) ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಆದರೆ ಅಲ್ಲಿ ಅವರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. 24 ವರ್ಷದ ಸೂರಜ್ ಸದ್ಯ ರಾಷ್ಟ್ರ ರಾಜಧಾನಿಯ ಬಿಎಲ್‌ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಿಫ್ಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಕೆಳಗೆ ಬಿದ್ದಿದ್ದಾರೆ. ಇದರಿಂದಾಗಿ ಮೂವರೂ ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಲಿಫ್ಟ್​ ಕುಸಿದು ಬಿದ್ದರೂ ಸುಮಾರು ಒಂದೂವರೆ ಗಂಟೆ ಕೆಲಸಗಾರರು ಒಳಗಿದ್ದರು. ಈ ವೇಳೆ ಅವರ ಮೊಬೈಲ್​ ಫೋನಿನ ಸಿಗ್ನಲ್​ ಕೂಡ ಕೆಲಸ ಮಾಡಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.