ದೇಶ

ಪಂಜಾಬ್‌: ಹೆಂಡತಿಗೆ ಗುಂಡಿಕ್ಕಿ ಕೊಂದು ತಾನೂ ಶೂಟ್ ಮಾಡಿಕೊಂಡ ಲೆಫ್ಟಿನೆಂಟ್ ಕರ್ನಲ್

ವೈವಾಹಿಕ ಕಲಹದಿಂದ ಬೇಸತ್ತು ಸೇನೆಯ ಲೆಫ್ಟಿನೆಂಟ್ ಕರ್ನಲ್ ಒಬ್ಬರು ಭಾನುವಾರ ರಾತ್ರಿ ತಮ್ಮ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಫಿರೋಜ್‌ಪುರ...

ಪಂಜಾಬ್‌: ಹೆಂಡತಿಗೆ ಗುಂಡಿಕ್ಕಿ ಕೊಂದು ತಾನೂ ಶೂಟ್ ಮಾಡಿಕೊಂಡ ಲೆಫ್ಟಿನೆಂಟ್ ಕರ್ನಲ್
ಸಾಂದರ್ಭಿಕ ಚಿತ್ರ
Published On :

ಚಂಡೀಗಢ: ವೈವಾಹಿಕ ಕಲಹದಿಂದ ಬೇಸತ್ತು ಸೇನೆಯ ಲೆಫ್ಟಿನೆಂಟ್ ಕರ್ನಲ್ ಒಬ್ಬರು ಭಾನುವಾರ ರಾತ್ರಿ  ತಮ್ಮ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಫಿರೋಜ್‌ಪುರ ಕಂಟೋನ್ಮೆಂಟ್‌ನಲ್ಲಿ ನಡೆದಿದೆ.

ಮೃತ ಅಧಿಕಾರಿಯನ್ನು ಲೆಫ್ಟಿನೆಂಟ್ ಕರ್ನಲ್ ನಿಶಾಂತ್ ಪರ್ಮಾರ್ ಮತ್ತು ಅವರ ಪತ್ನಿ ಡಿಂಪಲ್ ಎಂದು ಗುರುತಿಸಲಾಗಿದೆ. ದಂಪತಿಗೆ ಒಬ್ಬನೇ ಒಬ್ಬ ಮಗನಿದ್ದು, ಮಗನೂ ಅವರೊಂದಿಗೆ ವಾಸಿಸುತ್ತಿರಲಿಲ್ಲ. ಡಿಂಪಲ್ ಅವರು ನಿಶಾಂತ್ ಗೆ ಎರಡನೇ ಪತ್ನಿ ಎಂದು ತಿಳಿದು ಬಂದಿದೆ.

ಲೆಫ್ಟಿನೆಂಟ್ ಕರ್ನಲ್ ನಿಶಾಂತ್ ಅವರು ಫಿರೋಜ್‌ಪುರ ಕಂಟೋನ್ಮೆಂಟ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭಾನುವಾರ ರಾತ್ರಿ 42 ವರ್ಷದ ಪತ್ನಿ ಡಿಂಪಲ್(ಗೃಹಿಣಿ) ಅವರ ತಲೆಗೆ ಗುಂಡು ಹಾರಿಸಿ ನಂತರ ಕತ್ತು ಹಿಸುಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಂತರ ಅಧಿಕಾರಿಯು ತನ್ನ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ಸೇನಾ ಅಧಿಕಾರಿಗಳು ಮತ್ತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ನಡುವೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.