ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ.

ನವದೆಹಲಿ: ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ.
ಆರೋಪಿ ಪೂನಾವಾಲನನ್ನು ಇಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.
ಜನವರಿ 6 ರಂದು ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿತು. ಇದೀಗ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತಾರಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


