3 ಬೈಕ್ ನಲ್ಲಿ 14 ಮಂದಿ: ನಡು ರಸ್ತೆಯಲ್ಲೇ ಪುಂಡರಿಂದ ಅಪಾಯಕಾರಿ ಸ್ಟಂಟ್, ಪೊಲೀಸ್ ಕೇಸ್ ದಾಖಲು!!
ತೀವ್ರ ಚಳಿಯ ನಡುವೆಯೇ 3 ಬೈಕ್ ನಲ್ಲಿ 14 ಮಂದಿಯ ಯುವಕರ ಗುಂಪೊಂದು ಅಪಾಯಕಾರಿ ಬೈಕ್ ಸ್ಟಂಟ್ ಮಾಡಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬರೇಲಿ: ತೀವ್ರ ಚಳಿಯ ನಡುವೆಯೇ 3 ಬೈಕ್ ನಲ್ಲಿ 14 ಮಂದಿಯ ಯುವಕರ ಗುಂಪೊಂದು ಅಪಾಯಕಾರಿ ಬೈಕ್ ಸ್ಟಂಟ್ ಮಾಡಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಹೌದು.. ಉತ್ತರ ಪ್ರದೇಶದದ ಬರೇಲಿಯಲ್ಲಿ ಯುವಕರ ಗುಂಪೊಂದು ಅಪಾಯಕಾರಿ ಬೈಕ್ ಸ್ಟಂಟ್ ಮಾಡಲು ಹೋಗಿ ಪೊಲೀಸರಿಂದ ತಕ್ಕಶಾಸ್ತಿಗೆ ತುತ್ತಾಗಿದ್ದಾರೆ. 3 ಬೈಕ್ ನಲ್ಲಿ ಒಟ್ಟು 14 ಮಂದಿ ತಂಡ ಹೆದ್ದಾರಿಯಲ್ಲಿ ಅಪಾಯಕಾರಿ ರೀತಿಯಲ್ಲಿ ಬೈಕ್ ರೈಡ್ ಮಾಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವೈರಲ್ ವೀಡಿಯೊದಲ್ಲಿ, 14 ಜನರು ಮೂರು ಬೈಕ್‌ಗಳಲ್ಲಿ ಕುಳಿತು ಅಪಾಯಕಾರಿ ರೀತಿಯಲ್ಲಿ ಬೈಕ್ ಓಡಿಸುತ್ತಿರುವುದನ್ನು ನೋಡಬಹುದು, ಒಂದು ಬೈಕ್ ನಲ್ಲಿ ಆರು ಜನ ಮತ್ತು ಮತ್ತೆರಡು ಬೈಕ್ ನಲ್ಲಿ ತಲಾ ನಾಲ್ಕು ಜನ ಅಪಾಯಕಾರಿ ರೀತಿಯಲ್ಲಿ ಕುಳಿತು ಪ್ರಯಾಣ ಮಾಡುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ಈ ಘಟನೆ ಬರೇಲಿಯ ಡಿಯೋರಾನಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬರೇಲಿಯ ಹಿರಿಯ ಪೊಲೀಸ್ ಅಧಿಕಾರಿ ಅಖಿಲೇಶ್ ಕುಮಾರ್ ಚೌರಾಸಿಯಾ ಅವರು, 'ಮಾಹಿತಿ ಬಂದ ನಂತರ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ" ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


