ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನಿಗೆ ಗುಂಡಿಕ್ಕಿ ಹತ್ಯೆ
ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಗುರುವಾರ ಬೆಳಗ್ಗೆ ಪುರ್ಬಾ ಬರ್ಧಮಾನ್ ಜಿಲ್ಲೆಯ ಕೇತುಗ್ರಾಮದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ...

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಗುರುವಾರ ಬೆಳಗ್ಗೆ ಪುರ್ಬಾ ಬರ್ಧಮಾನ್ ಜಿಲ್ಲೆಯ ಕೇತುಗ್ರಾಮದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಆ ಪ್ರದೇಶದಲ್ಲಿ ಸಕ್ರಿಯ ಟಿಎಂಸಿ ಕಾರ್ಯಕರ್ತನಾಗಿದ್ದ ದುಲಾಲ್ ಶೇಖ್ ಅವರು ಅಮ್ಗಾರಿಯಾ ಬಜಾರ್‌ನ ಸ್ಟಾಲ್‌ನಲ್ಲಿ ಚಹಾ ಕುಡಿಯುತ್ತಿದ್ದಾಗ ಪಾಯಿಂಟ್-ಬ್ಲಾಂಕ್ ರೇಂಜ್ ನಿಂದ ಶೂಟ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಕ್ಷಣವೇ ಶೇಖ್(50) ಅವರನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅವರು ಹೇಳಿದ್ದಾರೆ.
"ಈ ಪ್ರದೇಶದಲ್ಲಿ ಟಿಎಂಸಿಯ ಪ್ರತಿಸ್ಪರ್ಧಿ ಬಣಕ್ಕೆ ಸೇರಿದ ಕೆಲವರು ನನ್ನ ತಂದೆಗೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು. ಅವರು ಮರಳು ಮತ್ತು ಕಟ್ಟಡ ಸಾಮಗ್ರಿಗಳ ಪೂರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ" ಎಂದು ಶೇಖ್ ಅವರ ಮಗ ಆರೋಪಿಸಿದ್ದಾರೆ.
ಟಿಎಂಸಿ ರಾಜ್ಯ ಉಪಾಧ್ಯಕ್ಷ ಜಾಯ್ ಪ್ರಕಾಶ್ ಮಜುಂದಾರ್ ಮಾತನಾಡಿ, ‘‘ಪಂಚಾಯತ್ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಸಿಪಿಐ(ಎಂ) ವಿವಿಧ ಕ್ಷೇತ್ರಗಳಲ್ಲಿ ಪ್ರಭಾವಿ ಟಿಎಂಸಿ ಸದಸ್ಯರನ್ನು ತೊಲಗಿಸಲು ಸಂಚು ರೂಪಿಸುತ್ತಿವೆ. ಶೇಖ್ ಅವರು ಇಂತಹ ಕೃತ್ಯಕ್ಕೆ ಬಲಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


