ಕಾಂಜಾವಾಲ ಪ್ರಕರಣ: ಅಂದು ರಾತ್ರಿ ಕರ್ತವ್ಯದಲ್ಲಿದ್ದ 11 ಪೊಲೀಸರ ಅಮಾನತು
ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು...

ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಅಮಾನತು ಮಾಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ, ಪ್ರಕರಣದ ಕುರಿತು ದೆಹಲಿ ಪೊಲೀಸರ ನೀಡಿದ ವಿವರವಾದ ವರದಿಯನ್ನು ಆಧರಿಸಿ ಅಂದು ಮೂರು ಪಿಸಿಆರ್ ವ್ಯಾನ್‌ಗಳಲ್ಲಿ ಮತ್ತು ಎರಡು ಪೊಲೀಸ್ ಪಿಕೆಟ್‌ಗಳಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿ 1 ರಂದು ರಾತ್ರಿ ಅಂಜಲಿ ಸಿಂಗ್ ಎಂಬ ಯುವತಿ ಚಾಲನೆ ಮಾಡುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಡಿ ಸಿಕ್ಕಿ 20 ವರ್ಷದ ಅಂಜಲಿ ಸಿಂಗ್ ಅವರನ್ನು ಆರೋಪಿಗಳು 12 ಕಿ.ಮೀ.ವರೆಗೆ ಎಳೆದೊಯ್ದಿದ್ದರು. ಪರಿಣಾಮ ಯುವತಿ ದೇಹದ ಮೇಲೆ 40 ಗಾಯಗಳಾಗಿತ್ತು ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳಿದೆ.
ಅಪಘಾತದ ತೀವ್ರತೆಗೆ ಆಕೆಯ ಮೆದುಳೇ ಕಾಣೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ತೋರಿದ ರೋಹಿಣಿ ಜಿಲ್ಲೆಯ ಒಟ್ಟು 11 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


