ದೇಶ

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು, ಆಮ್ಲಜನಕ ವ್ಯವಸ್ಥೆ ಅಳವಡಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು, ಆಮ್ಲಜನಕ ವ್ಯವಸ್ಥೆ ಅಳವಡಿಕೆ
ಲಲಿತ್ ಮೋದಿ
Published On :

ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಲಲಿತ್ ಮೋದಿ ಅವರು ಕೊರೋನಾ ಸೋಂಕು ಮತ್ತು ನ್ಯುಮೋನಿಯಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಬಾಹ್ಯ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಲಲಿತ್ ಮೋದಿ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ನೀಡಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, 'ಆಳವಾದ ನ್ಯುಮೋನಿಯಾ' ಹೊಂದಿದ್ದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಅಂತಿಮವಾಗಿ ಇಬ್ಬರು ವೈದ್ಯರು ಮತ್ತು ಸೂಪರ್‌ಸ್ಟಾರ್ ಸೂಪರ್-ದಕ್ಷ ಮಗನೊಂದಿಗೆ ಏರ್ ಆಂಬ್ಯುಲೆನ್ಸ್ ಮೂಲಕ ಬಂದಿಳಿದೆ. ಅವರು ಲಂಡನ್‌ನಲ್ಲಿ ನನಗಾಗಿ ತುಂಬಾ ಶ್ರಮಿಸಿದ್ದಾರೆ. ಹಾರಾಟ ಸುಗಮವಾಗಿತ್ತು. ದುರದೃಷ್ಟವಶಾತ್, ಇನ್ನೂ 24/7 ಬಾಹ್ಯ ಆಮ್ಲಜನಕ ವ್ಯವಸ್ಥೆಯಲ್ಲಿರಬೇಕು.. ಎಂದು ಪೋಸ್ಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.