ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದ ಚೌಧರಿ ನಿಧನ, ಪ್ರಧಾನಿ ಮೋದಿ ಸಂತಾಪ
ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸಂತೋಖ್ ಸಿಂಗ್ ಚೌಧರಿ ಜಿ ಅವರ ನಿಧನದಿಂದ ನೋವಾಗಿದೆ. ಪಂಜಾಬ್ ಜನರ ಸೇವೆಗಾಗಿ ಅವರು ಮಾಡಿದ ಪ್ರಯತ್ನಗಳನ್ನು ಸ್ಮರಿಸಲಾಗುವುದು ಎಂದು ಅವರು ಹೇಳಿದ್ದು, ಚೌಧರಿ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪ ಸೂಚಿಸಿದ್ದಾರೆ.
ಜಲಂಧರ್ ನ ಎರಡು ಬಾರಿ ಸಂಸದರಾಗಿದ್ದ ಚೌಧರಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾಗಿ ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


