ಗುಜರಾತ್ ನಲ್ಲಿ ಕಳೆದ ಐದು ವರ್ಷಗಳಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಪ್ರಮಾಣ ಶೇ. 50 ರಷ್ಟು ಹೆಚ್ಚಳ
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ, ಅಭಿವೃದ್ಧಿ ಹೊಂದಿದ ಗುಜರಾತ್ನಲ್ಲಿ ಕಳೆದ ಐದು ವರ್ಷಗಳಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಪ್ರಮಾಣ ಶೇ.50.44ರಷ್ಟು ಹೆಚ್ಚಾಗಿದೆ.

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ, ಅಭಿವೃದ್ಧಿ ಹೊಂದಿದ ಗುಜರಾತ್ನಲ್ಲಿ ಕಳೆದ ಐದು ವರ್ಷಗಳಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಪ್ರಮಾಣ ಶೇ.50.44ರಷ್ಟು ಹೆಚ್ಚಾಗಿದೆ.
ಗುಜರಾತ್ ನಲ್ಲಿ ಕಳೆದ ಐದು ವರ್ಷಗಳಲ್ಲಿ, ಪ್ರತಿ ದಿನ ಒಂಬತ್ತು ದಿನಗೂಲಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಅವರು ನೀಡಿದ ಕಳೆದ 5 ವರ್ಷಗಳ ಮಾಹಿತಿಯ ಪ್ರಕಾರ, ಕಾರ್ಮಿಕರ ಆತ್ಮಹತ್ಯೆ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ.
2017 ರಲ್ಲಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ ದಿನಗೂಲಿ ಕೂಲಿ ಕಾರ್ಮಿಕರ ಸಂಖ್ಯೆ 2131 ಅಂದರೆ ಪ್ರತಿದಿನ ಸರಾಸರಿ ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಆದರೆ 2018 ರಲ್ಲಿ ಇದು 2522 ಕ್ಕೆ ಏರಿಕೆಯಾಗಿದೆ. ಒಂದೇ ವರ್ಷದಲ್ಲಿ ಶೇ. 18.34 ರಷ್ಟು ಹೆಚ್ಚಾಗಿದೆ. 2019 ರಲ್ಲಿ 2649, 2020 ರಲ್ಲಿ 2754 ಮತ್ತು 2021 ರಲ್ಲಿ 3206 ದಿನಗೂಲಿ ಕಾರ್ಮಿಕರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗುಜರಾತಿನಲ್ಲಿ ಅತ್ಯಂತ ಕಡಿಮೆ ದಿನಗೂಲಿ ಇದ್ದು, ಹೆಚ್ಚುತ್ತಿರುವ ಕಾರ್ಮಿಕರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


