ದೇಶ

ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಭಾನುವಾರ ಧಾರ್ ಜಿಲ್ಲೆಯ ಮನವಾರ್ ಪಟ್ಟಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ...

ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್
Published On :

ಧಾರ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಭಾನುವಾರ ಧಾರ್ ಜಿಲ್ಲೆಯ ಮನವಾರ್ ಪಟ್ಟಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಇಂದು ಸಂಜೆ ಚೌಹಾಣ್ ಅವರು ಹೆಲಿಕಾಪ್ಟರ್ ನಲ್ಲಿ ಮನವಾರದಿಂದ ಧಾರ್‌ಗೆ ಹೋಗುತ್ತಿದ್ದರು. ಆದರೆ ಕಾಪ್ಟರ್ ಟೇಕಾಫ್ ಆದ ಕೆಲ ಸಮಯದ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಾಪಸ್ ಮನವಾರ್ ಪಟ್ಟಣಕ್ಕೆ ಆಗಮಿಸಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ ಧೀರಜ್ ಬಬ್ಬರ್ ಅವರು ಹೇಳಿದ್ದಾರೆ.

ಘಟನೆಯ ನಂತರ ಮಧ್ಯಪ್ರದೇಶ ಸಿಎಂ ರಸ್ತೆ ಮೂಲಕ ಧಾರ್‌ಗೆ ಪ್ರಯಾಣ ಬೆಳೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.