ಹೈದರಾಬಾದ್: ನಾಯಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಡೆಲಿವರಿ ಬಾಯ್ ಸಾವು
ನಾಯಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಡೆಲವರಿ ಬಾಯ್ ಕಟ್ಟಡದಿಂದ ಜಿಗಿದಿದ್ದ. ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ರಾತ್ರಿ ಸಾವನ್ನಪ್ಪಿದ್ದಾನೆ.

ಹೈದರಾಬಾದ್: ನಾಯಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಡೆಲವರಿ ಬಾಯ್ ಕಟ್ಟಡದಿಂದ ಜಿಗಿದಿದ್ದ. ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ರಾತ್ರಿ ಸಾವನ್ನಪ್ಪಿದ್ದಾನೆ.
ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿರುವ ಗ್ರಾಹಕರ ಮನೆ ಬಾಗಿಲು ತಟ್ಟಿದಾಗ ಜರ್ಮನ್ ಶೆಪರ್ಡ್ ಆತನ ಮೇಲೆ ಎರಗಿತು. ಭಯಭೀತನಾದ ರಿಜ್ವಾನ್ ಓಡಲು ಆರಂಭಿಸಿದ್ದಾನೆ. ನಾಯಿಯು ತನ್ನನ್ನು ಹಿಂಬಾಲಿಸಿಕೊಂಡು ಓಡಿದೆ, ಈ ವೇಳೆ ಭಯದಿಂದ ಅವನು ಕಟ್ಟಡದಿಂದ ಜಿಗಿದಿದ್ದಾನೆ.
ನಂತರ ಗಾಯಗೊಂಡ ಆತನನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಯೊಸೌಫ್ ಘಡಾ ನಿವಾಸಿ ರಿಜ್ವಾನ್ ಕಳೆದ ಮೂರು ವರ್ಷಗಳಿಂದ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಘಟನೆ ನಡೆದ ತಕ್ಷಣ ಆತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


