ಜೂನ್ 2024 ವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಮುಂದುವರಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಘೋಷಣೆ
ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ 2024 ರ ಜೂನ್ ವರೆಗೆ ಮುಂದುವರೆಯಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಘೋಷಿಸಿದ್ದಾರೆ.

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ 2024 ರ ಜೂನ್ ವರೆಗೆ ಮುಂದುವರೆಯಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಘೋಷಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಮಿತ್ ಶಾ ಈ ಘೋಷಣೆ ಮಾಡಿದ್ದು, ನಿರೀಕ್ಷೆಯಂತೆಯೇ ನಡ್ಡಾ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
2024 ರಲ್ಲಿ ಲೋಕಸಭಾ ಚುನಾವಣೆಯನ್ನು ನಡ್ಡಾ ಅವರ ನೇತೃತ್ವದಲ್ಲಿಯೇ ಮುಂದುವರೆಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. 9 ರಾಜ್ಯಗಳ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ನಡ್ಡಾ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗಿತ್ತು.
ನಡ್ಡಾ ಅವರನ್ನು ಮುಂದುವರೆಸಲು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ ಅವರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು 2019ಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ" ಎಂದು ಅಮಿತ್ ಶಾ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


