ದೇಶ

ದೆಹಲಿ ಲೀಲಾ ಪ್ಯಾಲೇಸ್ ಹೋಟೆಲ್‌ ನಲ್ಲಿ ತಂಗಿ, 23 ಲಕ್ಷ ರೂ. ಬಿಲ್ ಪಾವತಿಸದೆ 'ಖತರ್ನಾಕ್' ವಿದೇಶಿ ಗ್ರಾಹಕ ಪರಾರಿ

ವಿದೇಶಿ ಗ್ರಾಹಕನೋರ್ವ ದೆಹಲಿಯ ಐಶಾರಾಮಿ ಲೀಲಾ ಪ್ಯಾಲೇಸ್ ಹೋಟೆಲ್‌ ತಂಗಿ 23 ಲಕ್ಷ ರೂ ಬಿಲ್ ಪಾವತಿಸದೇ ಪರಾರಿಯಾಗಿರುವ ಘಟನೆ ನಡೆದಿದೆ.

ದೆಹಲಿ ಲೀಲಾ ಪ್ಯಾಲೇಸ್ ಹೋಟೆಲ್‌ ನಲ್ಲಿ ತಂಗಿ, 23 ಲಕ್ಷ ರೂ. ಬಿಲ್ ಪಾವತಿಸದೆ 'ಖತರ್ನಾಕ್' ವಿದೇಶಿ ಗ್ರಾಹಕ ಪರಾರಿ
ದೆಹಲಿ ಲೀಲಾ ಪ್ಯಾಲೆಸ್ ಹೊಟೆಲ್
Published On :

ನವದೆಹಲಿ: ವಿದೇಶಿ ಗ್ರಾಹಕನೋರ್ವ ದೆಹಲಿಯ ಐಶಾರಾಮಿ ಲೀಲಾ ಪ್ಯಾಲೇಸ್ ಹೋಟೆಲ್‌ ತಂಗಿ 23 ಲಕ್ಷ ರೂ ಬಿಲ್ ಪಾವತಿಸದೇ ಪರಾರಿಯಾಗಿರುವ ಘಟನೆ ನಡೆದಿದೆ.

ಯುಎಇ ದೇಶದ ಉನ್ನತಾಧಿಕಾರಿ ಎಂದು ಹೇಳಿಕೊಂಡಿದ್ದ ಮಹಮ್ಮದ್ ಶರೀಫ್ ಎಂಬಾತ ಆಗಸ್ಟ್‌ 1 ರಿಂದ ನವೆಂಬರ್ 20ರವರೆಗೆ ಹೋಟೆಲ್‌ನಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ತಂಗಿದ್ದ. ದೆಹಲಿಯ ಸರೋಜಿನಿ ನಗರದಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್‌ಗೆ ಈ ವ್ಯಕ್ತಿ 23,46,413 ರೂ ಬಿಲ್ ಅನ್ನು ಪಾವತಿಸದೇ ಪರಾರಿಯಾಗಿದ್ದಾನೆ. ಈ ಕುರಿತು ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ಲೀಲಾ ಪ್ಯಾಲೇಸ್ ಹೋಟೆಲ್ ಮ್ಯಾನೇಜರ್ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ.

ಮಹಮ್ಮದ್ ಶರೀಫ್ ಯುಎಇ ಸುಲ್ತಾನ್‌ ಶೇಕ್ ಫಲ್ಹಾ ಬಿನ್ ಜಾಯೇದ್ ಅಲ್ ನಹ್ಯಾನ್ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೋಟೆಲ್‌ಗೆ ನಂಬಿಸಲು ಆರಂಭದಲ್ಲಿ ಮಹಮ್ಮದ್ ಶರೀಫ್ 11.5 ಲಕ್ಷ ಹಣ ಪಾವತಿಸಿದ್ದ. ಆದರೆ, ಬಾಕಿ 23 ಲಕ್ಷ ರೂ ಪಾವತಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ದೂರು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಮಹಮ್ಮದ್ ಷರೀಫ್ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.