ದೇಶ

ಪಂಜಾಬ್‌: ಭಾರತದ ಗಡಿಯೊಳಗೆ ನುಸುಳುತ್ತಿದ್ದ ಪಾಕ್ ಡ್ರೋಣ್ ಹೊಡೆದುರುಳಿಸಿದ ಬಿಎಸ್ಎಫ್, ಶಸ್ತ್ರಾಸ್ತ್ರಗಳು ವಶಕ್ಕೆ

ಶಸ್ತ್ರಾಸ್ತ್ರ ಕಳ್ಳಸಾಗಣೆಗೆ ಯತ್ನಿಸಿದ ಪಾಕಿಸ್ತಾನದ ಡ್ರೋನ್​ ಹೊಡೆದುರುಳಿಸುವಲ್ಲಿ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಯಶಸ್ವಿಯಾಗಿದೆ.

ಪಂಜಾಬ್‌: ಭಾರತದ ಗಡಿಯೊಳಗೆ ನುಸುಳುತ್ತಿದ್ದ ಪಾಕ್ ಡ್ರೋಣ್ ಹೊಡೆದುರುಳಿಸಿದ ಬಿಎಸ್ಎಫ್, ಶಸ್ತ್ರಾಸ್ತ್ರಗಳು ವಶಕ್ಕೆ
ಸಂಗ್ರಹ ಚಿತ್ರ
Published On :

ನವದೆಹಲಿ​: ಶಸ್ತ್ರಾಸ್ತ್ರ ಕಳ್ಳಸಾಗಣೆಗೆ ಯತ್ನಿಸಿದ ಪಾಕಿಸ್ತಾನದ ಡ್ರೋನ್​ ಹೊಡೆದುರುಳಿಸುವಲ್ಲಿ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಯಶಸ್ವಿಯಾಗಿದೆ.

ಪಂಜಾಬ್​ನ ಗುರುದಾಸ್​ಪುರ್​ನದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿರುವುದಾಗಿ ಬಿಎಸ್​ಎಫ್​ ಅಧಿಕಾರಿಗಳು ತಿಳಿಸಿದ್ದಾರೆ. ಚೀನಾ ನಿರ್ಮಿತ ಪಿಸ್ತೂಲ್‌ಗಳು ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, 2023ರ ಜನವರಿ 17 ಮತ್ತು 18ರ ರಾತ್ರಿ ಗುರುದಾಸ್​ಪುರದ ಉಂಚ ತಕ್ಲಾ ಗ್ರಾಮದ ಹೊರವಲಯದಲ್ಲಿ ಬಿಎಸ್​ಎಫ್​ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಪಾಕಿಸ್ತಾನದ ಕಡೆಯಿಂದ ಸದ್ದು ಕೇಳಿಸಿದ್ದು, ಡ್ರೋಣ್​​ ಸದ್ದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಬಿಎಸ್​ಎಫ್​ ಆ ದಿಕ್ಕಿನತ್ತ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯ ವೇಳೆ ಏನೋ ಒಂದು ವಸ್ತು ಕೆಳಗೆ ಬಿದ್ದಿತ್ತು. ವಸ್ತು ಬಿದ್ದ ಈ ಪ್ರದೇಶದಲ್ಲಿ ಹುಡುಕಾಟ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಂಚ ತಕ್ಲಾ ಗ್ರಾಮದಲ್ಲಿ ಕೆಲವು ಮರದ ಬಾಕ್ಸ್​ನಲ್ಲಿ ಪ್ಯಾಕೆಟ್​ಗಳು ಪತ್ತೆಯಾದವು. ಪ್ಯಾಕೆಟ್​ ತೆರೆದಾಗ ಚೀನಾ ನಿರ್ಮಿತವಾದ 4 ಪಿಸ್ತೂಲ್​, 8 ಮ್ಯಾಗಜೀನ್​ ಮತ್ತು 47 ಗುಂಡುಗಳು ದೊರೆತಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.