ಛತ್ತೀಸ್‌ಗಢ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಶಾಲಾ ಬಸ್ ಕಂಡಕ್ಟರ್ ಬಂಧನ
ಛತ್ತೀಸ್‌ಗಢದ ಮುಂಗೇಲಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಮೇಲೆ ಆಕೆ ತೆರಳುತ್ತಿದ್ದ ಶಾಲಾ ಬಸ್ ಕಂಡಕ್ಟರ್ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಬಿಲಾಸ್ಪುರ್: ಛತ್ತೀಸ್‌ಗಢದ ಮುಂಗೇಲಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಮೇಲೆ ಆಕೆ ತೆರಳುತ್ತಿದ್ದ ಶಾಲಾ ಬಸ್ ಕಂಡಕ್ಟರ್ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಜನವರಿ 17 ರಂದು 41 ವರ್ಷದ ಆರೋಪಿಯು ತನ್ನ ನಿಗದಿತ ನಿಲ್ದಾಣದಲ್ಲಿ ಶಾಲಾ ಬಸ್‌ನಿಂದ ಇಳಿದ ನಂತರ ಮಗುವನ್ನು ಮನೆಗೆ ಕರೆದುಕೊಂಡು ಹೋದಾಗ ಈ ಘಟನೆ ನಡೆದಿದೆ ಎಂದು ಮುಂಗೇಲಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಮೋಹನ್ ಸಿಂಗ್ ಹೇಳಿದ್ದಾರೆ.
ಬಸ್‌ನಲ್ಲಿ ಮೂವರು ಮಹಿಳಾ ಶಿಕ್ಷಕರು ಮತ್ತು ಇತರ ಮಕ್ಕಳು ಇದ್ದರು. ಬಸ್ ನಿಲ್ದಾಣದಿಂದ ಮನೆಗೆ ಡ್ರಾಪ್ ಮಾಡುವಾಗ ಆರೋಪಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗು ತನ್ನ ಖಾಸಗಿ ಅಂಗಗಳಲ್ಲಿ ನೋವೆಂದು ದೂರು ನೀಡಿದಾಗ, ಆಕೆಯ ತಾಯಿ ಮಗುವನ್ನು ವೈದ್ಯರ ಬಳಿಗೆ ಕರೆದೊಯ್ದಿದ್ದಾರೆ. ಬಳಿಕ ಖಾಸಗಿ ಭಾಗಗಳಲ್ಲಿ ರಕ್ತಸ್ರಾವವಾಗುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.
ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಎರಡು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಬಸ್‌ನಲ್ಲಿದ್ದ ಶಿಕ್ಷಕಿಯರು ಮತ್ತು ಚಾಲಕನ ಹೇಳಿಕೆಗಳನ್ನು ಪಡೆಯಲಾಗಿದೆ. ಆದರೆ, ಅವರು ಘಟನೆಯ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿ ಅತ್ಯಾಚಾರ ಮತ್ತು ಇತರ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

