ನ್ಯಾಯಾಧೀಶರಾಗಿ ಸಲಿಂಗಕಾಮಿ ಸೌರಭ್ ಕಿರ್ಪಾಲ್ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಮತ್ತೆ ಬೆಂಬಲ
ಬಹಿರಂಗವಾಗಿ ತಾನು ಸಲಿಂಗಕಾಮಿ ಎಂದು ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸುವ ತನ್ನ ನವೆಂಬರ್ 11, 2021 ರ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಪುನರುಚ್ಚರಿಸಿದೆ.

ನವದೆಹಲಿ: ಬಹಿರಂಗವಾಗಿ ತಾನು ಸಲಿಂಗಕಾಮಿ ಎಂದು ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸುವ ತನ್ನ ನವೆಂಬರ್ 11, 2021 ರ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಪುನರುಚ್ಚರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಕೊಲಿಜಿಯಂ, ಕಿರ್ಪಾಲ್ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವ ಪ್ರಸ್ತಾವನೆಯು ಕಳೆದ ಐದು ವರ್ಷಗಳಿಂದ ಬಾಕಿ ಉಳಿದಿದೆ. ಈ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.
ಕಿರ್ಪಾಲ್ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ ಎನ್ ಕಿರ್ಪಾಲ್ ಅವರ ಪುತ್ರರಾಗಿದ್ದು, 2017 ರಿಂದ ಅವರ ನೇಮಕಾತಿಯನ್ನು ಸ್ಥಗಿತಗೊಳಿಸಲಾಗಿದೆ.
ಕಿರ್ಪಾಲ್ ಅವರ ವಿರುದ್ಧದ ಆಕ್ಷೇಪಣೆಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ನಂತರ, ಇದೀಗ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಲು ಕೇಂದ್ರ ಸರ್ಕಾರಕ್ಕೆ ಅವರ ಹೆಸರನ್ನು ಮತ್ತೆ ಶಿಫಾರಸು ಮಾಡಲು ಕೊಲಿಜಿಯಂ ನಿರ್ಧರಿಸಿದೆ.
ದೆಹಲಿ ಹೈಕೋರ್ಟ್ ಕೊಲಿಜಿಯಂ 2017 ರಲ್ಲಿ ಕಿರ್ಪಾಲ್ ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸುವಂತೆ ಶಿಫಾರಸು ಮಾಡಿತ್ತು. ತರುವಾಯ, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಬಾರಿ ಶಿಫಾರಸು ಮಾಡಿದೆ. ಆದರೆ ಎಲ್ಲಾ ಸಂದರ್ಭಗಳಲ್ಲಿ ಅವರ ನೇಮಕಾತಿಯನ್ನು ಮುಂದೂಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


