ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ, ಪೈಲಟ್ ಪರವಾನಗಿ ಅಮಾನತು- DGCA
ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ನಿರ್ಣಯ ಕೈಗೊಂಡಿರುವ ವಾಯುಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ (DGCA) ಏರ್ ಇಂಡಿಯಾ (Air India)ಗೆ 30 ಲಕ್ಷ ರೂ ದಂಡ ವಿಧಿಸಿದೆ.

ನವದೆಹಲಿ: ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ನಿರ್ಣಯ ಕೈಗೊಂಡಿರುವ ವಾಯುಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ (DGCA) ಏರ್ ಇಂಡಿಯಾ (Air India)ಗೆ 30 ಲಕ್ಷ ರೂ ದಂಡ ವಿಧಿಸಿದೆ.
ಹೌದು.. ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಾಯುಯಾನ ನಿಯಂತ್ರಕ ಡಿಜಿಸಿಎ ಏರ್ ಇಂಡಿಯಾಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಮಾತ್ರವಲ್ಲದೇ ಅಂದು ಘಟನೆ ನಡೆದ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್-ಕಮಾಂಡ್ ಪರವಾನಗಿಯನ್ನು ಕೂಡ ಅಮಾನತುಗೊಳಿಸಿದೆ.
ನವೆಂಬರ್ 26, 2022 ರಂದು ಸಂಭವಿಸಿದ ಈ ಘಟನೆಯಲ್ಲಿ, ವಾಚ್‌ಡಾಗ್ (ವಿಚಕ್ಷಣಾ ವಿಭಾಗ) ತನ್ನ ಕರ್ತವ್ಯವನ್ನು ನಿರ್ವಹಿಸಲು ವಿಫಲವಾದ ಕಾರಣಕ್ಕಾಗಿ ಏರ್ ಇಂಡಿಯಾದ ಇನ್-ಫ್ಲೈಟ್ ಸೇವೆಗಳ ನಿರ್ದೇಶಕರ ಮೇಲೆ 3 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಘಟನೆಯು ಜನವರಿ 4 ರಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ಗಮನಕ್ಕೆ ಬಂದಿತ್ತು. ಇದು ವಿಮಾನಯಾನ ಸಂಬಂಧಿಸಿದ ಇತ್ತೀಚಿನ ಕ್ರಮಗಳು ವಿವಿಧ ನಿಯಮಗಳ ಉಲ್ಲಂಘನೆಯಾಗಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


